ಚಾಮರಾಜನಗರ:ಶವ ಸಂಸ್ಕಾರಕ್ಕೂ ಹಣವಿಲ್ಲದೆ ಪತ್ನಿಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಸೈಕಲ್​ನಲ್ಲಿ ಸಾಗಿಸುತ್ತಿದ್ದ ಹೃದಯವಿದ್ರಾವಕ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಕಾಗೆಪುರ ಗ್ರಾಮದ ಕಾಳಮ್ಮ(26) ಮೃತ ದುರ್ದೈವಿ. ಇವರ ಪತಿ ರವಿ ಮತ್ತು ಕಾಳಮ್ಮ ಇಬ್ಬರೂ ಚಿಂದಿ ಆಯುವ ಕೆಲಸ ಮಾಡಿಕೊಂಡು ಯಳಂದೂರು ತಾಲೂಕಿನ ಕಂದಹಳ್ಳಿ ಸಮೀಪ ವಾಸವಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಕಾಳಮ್ಮ ಇಂದು(ಬುಧವಾರ) ಮನೆಯಲ್ಲೇ ಮೃತಪಟ್ಟಿದ್ದು, ಆಕೆಯನ್ನು ಕಳೆದುಕೊಂಡ ನೋವಿನಲ್ಲಿದ್ದ ಪತಿಗೆ ಅಂತ್ಯಸಂಸ್ಕಾರಕ್ಕೆ ಹಣ ಹೊಂದಿಸುವುದು ಹೇಗೆಂದು ದಿಕ್ಕುತೋಚದೆ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿಕೊಂಡು ಸೈಕಲ್​ನಲ್ಲಿ ಸಾಗಿಸುತ್ತಿದ್ದ.
ಇದನ್ನು ಕಂಡ ಸ್ಥಳೀಯರು ವಿಚಾರಿಸಿದಾಗ ಗಂಡ ಅಸಹಾಯಕತೆ ತೋಡಿಕೊಂಡಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಿದರು.(ದಿಗ್ವಿಜಯ ನ್ಯೂಸ್, ಚಾಮರಾಜನಗರ)
ಕಲಬುರಗಿಯಲ್ಲಿ ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ, ಪತ್ನಿ ದುರ್ಮರಣ

ಜೂಜಾಟಕ್ಕೆ ತನ್ನನ್ನೇ ಪಣಕ್ಕಿಟ್ಟು ಸೋತು ಪರ ಪುರುಷನ ಪಾಲಾದ 2 ಮಕ್ಕಳ ತಾಯಿ! ಗಂಡನ ಗೋಳು ನೋಡಲಾಗ್ತಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
