ಹಳಿಯಾಳ:ಹೆಂಡತಿಯನ್ನು ಕೊಲೆ ಮಾಡಿ ನೀರಿನ ಖಾಲಿ ಬ್ಯಾರಲ್​​ನಲ್ಲಿ ಬಚ್ಚಿಟ್ಟಿದ್ದ ವ್ಯಕ್ತಿಯನ್ನು ಹಳಿಯಾಳ ಹಾಗೂ ರಾಮನಗರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಶಾಂತಕುಮಾರಿ ಮಡಿವಾಳ (38) ಮೃತ ದುರ್ದೈವಿ. ತೆರಗಾಂವ ಗ್ರಾಮದ ತುಕಾರಾಮ ಮಡಿವಾಳ ಕೊಲೆ ಮಾಡಿದ ಆರೋಪಿ. ತುಕಾರಾಮ, ಪಕ್ಕದ ಮನೆಯ ಮಹಿಳೆಯೊಂದಿಗೆ ಮಾತನಾಡುವ ವಿಷಯಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದಾನೆ. ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಪತ್ನಿ ಶಾಂತಕುಮಾರಿಯ ಕತ್ತುಹಿಸುಕಿ ಕೊಂದಿದ್ದಾನೆ.  .
ಇದನ್ನೂ ಓದಿ:ಕೋವಿಡ್ ಲಸಿಕೆಯಿಂದ ಭಾರತದಲ್ಲಿ 34 ಲಕ್ಷ ಜನರ ಜೀವ ರಕ್ಷಣೆ: ಸ್ಟ್ಯಾನ್‌ಫೋರ್ಡ್‌ ವಿವಿ ಅಧ್ಯಯನ
ಕೊಲೆಯನ್ನ ಮುಚ್ಚಿ ಹಾಕುವ ಉದ್ದೇಶದಿಂದ ಪತ್ನಿಯ ಮೃತ ದೇಹವನ್ನು ತುಕಾರಾಮ್ ಬ್ಯಾರಲ್​​ನಲ್ಲಿ ಬಚ್ಚಿಟ್ಟಿದ್ದ. ಖಾನಾಪುರ ಮೂಲದ ರಿಜ್ವಾನ್ ಕುಂಬಾರಿ ಎಂಬುವವರ ಟಾಟಾ ಏಸ್ ವಾಹನವನ್ನು ಬಾಡಿಗೆ ಪಡೆದು ಕಾಡಿನಲ್ಲಿ ಮೃತದೇಹವನ್ನು ಎಸೆಯಲು ಮುಂದಾದಾಗ ಹಳಿಯಾಳ ಮತ್ತು ರಾಮನಗರದ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
