ಗದಗ:ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಮೃತ ದುರ್ದೈವಿ. ಈತನ ಪತ್ನಿ ಲಲಿತಾ ಮತ್ತು ಈಕೆಯ ಪ್ರಿಯಕರ ಸೋಮಪ್ಪ ಚೆನ್ನಪ್ಪ ಲಮಾಣಿ ಕೊಲೆ ಆರೋಪಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಣ ಪಾಂಡಪ್ಪ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ.
ಲಲಿತಾ ಮತ್ತು ಸೋಮಪ್ಪ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದರು. ಈ ಅಕ್ರಮಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಮುಗಿಸಲು ಪ್ರಿಯಕರನೊಂದಿಗೆ ಪತ್ನಿ ಸಂಚು ರೂಪಿಸಿದ್ದಳು. ಅದರಂತೆ ಲಕ್ಷ್ಮಣ ಪಾಂಡಪ್ಪ ಲಮಾಣಿಯನ್ನು ಕೊಂದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮುಳುಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧನದಲ್ಲಿರುವ ಆರೋಪಿಗಳನ್ನು ಪೊಲೀಸರು ಶುಕ್ರವಾರ ಕೋರ್ಟ್​ಗೆ ಹಾಜರು ಪಡಿಸಲಿದ್ದಾರೆ.
ಅಣ್ಣ ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡ, ತುಂಬಾ ನೊಂದಿರುವೆ… ಎಂದ ಗರ್ಭಿಣಿ ಬಾಲಕಿ ಸಾವಿನ ಕದ ತಟ್ಟಿದಳು

ಅಪಘಾತದಲ್ಲಿ ಪಾರಾದರೂ ಬೆನ್ನಟ್ಟಿದ ಜವರಾಯ ಸಾಲಾಗಿ ತಾಯಿ-ಮಗ-ಮೊಮ್ಮಗನ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 20 =
Remember me
