ಸರಳ ಆಚರಣೆಗೆ ಅವಕಾಶ ನೀಡಲು ಒತ್ತಾಯಹೂವಿನಹಡಗಲಿ:ತಾಲೂಕಿನ ಮೈಲಾರ ಕಾರ್ಣಿಕೋತ್ಸವ, ಕುರುವತ್ತಿ ರಥೋತ್ಸವವನ್ನು ಜಿಲ್ಲಾಧಿಕಾರಿ ರದ್ದುಪಡಿಸಿರುವುದು ಸರಿಯಲ್ಲ. ಸರಳವಾಗಿ ಜಾತ್ರೆ ನಡೆಸಲು ಅವಕಾಶ ನೀಡಬೇಕು ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ, ಮೈಲಾರ ದೇವಸ್ಥಾನದ ಧರ್ಮಕರ್ತ ಶ್ರೀಗುರು ವೆಂಕಪ್ಪಯ್ಯ ಒಡೆಯರ್ ಒತ್ತಾಯಿಸಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಾತ್ರೆ ನಿಷೇಧದ ಬಗ್ಗೆ ಜಿಲ್ಲಾಧಿಕಾರಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ. ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಭಕ್ತರನ್ನು ಕಡೆಗಣಿಸಿ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಪ್ರತಿ ವರ್ಷದಂತೆ ಮೈಲಾರ ಕಾರ್ಣಿಕೋತ್ಸವ, ಕುರುವತ್ತಿ ರಥೋತ್ಸವ ನಡೆಯಬೇಕೆಂಬುದು ಲಕ್ಷಾಂತರ ಭಕ್ತರ ಅಭಿಪ್ರಾಯವಾಗಿದೆ ಎಂದು ಶಾಸಕ ಪರಮೇಶ್ವರ ನಾಯ್ಕ ಹೇಳಿದರು.
ಈಗಾಗಲೇ ರಾಜ್ಯದಲ್ಲಿ ಕರೊನಾ ಕಡಿಮೆಯಾಗಿದ್ದು, ಹಲವು ಜಾತ್ರೋತ್ಸವಗಳು ವಿಜೃಂಭಣೆಯಿಂದ ನಡೆಯುತ್ತಿವೆ. ರಾಜ್ಯ, ಅಂತಾರಾಜ್ಯದಿಂದ ಈ ಭಾಗದ ಜಾತ್ರೆಗಳಿಗೆ ಭಕ್ತರಿಗೆ ನಿರಾಸೆ ಮಾಡದೆ ಜಿಲ್ಲಾಧಿಕಾರಿಗಳು ಸರಳವಾಗಿ ಆಚರಿಸಲು ಅವಕಾಶ ನೀಡಬೇಕು. ಮೈಲಾರ ದೇವಸ್ಥಾನದಲ್ಲೇ ಭಕ್ತರು, ಜನಪ್ರತಿನಿಧಿಗಳ ಸಭೆ ಕರೆದು ಜಾತ್ರೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಧರ್ಮಕರ್ತ ಶ್ರೀಗುರು ವೆಂಕಪ್ಪಯ್ಯ ಒಡೆಯರ್ ಮಾತನಾಡಿ, ಮೈಲಾರದ ಜಾತ್ರೆ ನಡೆಸಲು ಜಿಲ್ಲಾಧಿಕಾರಿಗೆ ನಾನು ಮನವಿ ಮಾಡಿದ್ದೆ. ಆದರೆ ಕರೊನಾದಿಂದಾಗಿ ಜಾತ್ರೆ ನಿಷೇಧಿಸಿದ್ದೇವೆ ಎಂದು ಆದೇಶ ಮಾಡಿದ್ದಾರೆ. ಕೂಡಲೇ ಜಾತ್ರೆ ನಿಷೇಧದ ಬಗ್ಗೆ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.
ಟಿಎಪಿಸಿಎಂಸಿ ಅಧ್ಯಕ್ಷ ಹನುಮಂತಪ್ಪ, ಪುರಸಭೆ ಸದಸ್ಯ ಜ್ಯೋತಿ ಮಲ್ಲಣ್ಣ, ಪಕ್ಕೀರಪ್ಪ, ವಸಂತ, ಚಾಂದ್‌ಸಾಬ್ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nine =
Remember me
