ಬೆಂಗಳೂರು:ಕರೊನಾ ಸೋಂಕು ಪೀಡಿತನಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ಬಿಬಿಎಂಪಿ ಅಧಿಕಾರಿಗಳು ಹೋದಾಗ ಹೈಡ್ರಾಮಾ ನಡೆದಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿನ ಡಾ. ವೇಣು ಹೆಲ್ತ್ ಕೇರ್ ಸೆಂಟರ್​ನಲ್ಲಿ ಬುಧವಾರ ಬಿಹಾರ ಮೂಲದ 54 ವರ್ಷದ ಕಟ್ಟಡ ಕಾರ್ವಿುಕ ಎದೆನೋವು ಎಂದು ಚಿಕಿತ್ಸೆಗೆ ಹೋಗಿದ್ದ. ಆಸ್ಪತ್ರೆ ವೈದ್ಯ ಡಾ. ವೇಣುಗೋಪಾಲ್, ರೋಗಿಗೆ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಜಯದೇವ ಆಸ್ಪತ್ರೆಗೆ ಕಳುಹಿಸಿದ್ದರು.
ಅಲ್ಲಿನ ವೈದ್ಯರು ಪರೀಕ್ಷೆ ನಡೆಸದೆ ವಿಕ್ಟೋರಿಯಾ ಆಸ್ಪತ್ರೆಗೆ ಆಂಬುಲೆನ್ಸ್​ನಲ್ಲಿ ರವಾನಿಸಿದ್ದರು. ಕೋವಿಡ್- 19 ಪರೀಕ್ಷೆ ನಡೆಸಿದಾಗ ಕಾರ್ವಿುಕನಿಗೆ ಸೋಂಕು ದೃಢಪಟ್ಟಿದೆ. ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯರು, ಕರೊನಾ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಪಡೆದು ಡಾ. ವೇಣು ಹೆಲ್ತ್ ಕೇರ್ ಸೆಂಟರ್ ಸೀಲ್​ಡೌನ್ ಮಾಡಲು ಹೋಗಿದ್ದಾರೆ. ವಿಷಯ ತಿಳಿದ ಡಾ. ವೇಣುಗೋಪಾಲ್, ಆಸ್ಪತ್ರೆ ಬಾಗಿಲು ಲಾಕ್ ಮಾಡಿಕೊಂಡು ಕ್ವಾರಂಟೈನ್​ಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಎಷ್ಟೇ ಮನವರಿಕೆ ಮಾಡಿದರೂ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಬಾಗಿಲು ತೆಗೆದಿಲ್ಲ.
ಕೊನೆಗೆ ಎರಡು ತಾಸಿನ ಬಳಿಕ ಡೋರ್ ಒಡೆದು ಒಳಪ್ರವೇಶ ಮಾಡಿ ವೈದ್ಯರು ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್​ಗೆ ಒಳಪಡಿಸಿ ಆಸ್ಪತ್ರೆಯನ್ನು ಸೀಲ್​ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಪುಲಿಕೇಶಿನಗರದಲ್ಲಿಯೂ ಬಂದ್
ಕರೊನಾ ಸೋಂಕಿನ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ಪುಲಿಕೇಶಿನಗರದ ಖಾಸಗಿ ಆಸ್ಪತ್ರೆ ವೈದ್ಯರು ಮತ್ತು ನರ್ಸ್​ಗೂ ಸೋಂಕು ತಗುಲಿದೆ. ಅದಕ್ಕಾಗಿ ಆಸ್ಪತ್ರೆಯನ್ನು ಸಂಪೂರ್ಣ ಸೀಲ್​ಡೌನ್ ಮಾಡಿ ಸುತ್ತಲ ಪ್ರದೇಶದಲ್ಲಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಫಿ ಕೊಡಲು ನಿರಾಕರಿಸಿದ ಮಡದಿಗೆ ಪತಿ ಮಹಾಶಯ ಕೊಟ್ಟ ಶಿಕ್ಷೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 1 =
Remember me
