ನವದೆಹಲಿ:ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಂತರ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆದ್ದಿರುವ ಕೇಂದ್ರ ಸಚಿವರಾಗಿ ಎಚ್​.ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ:ಮೋದಿ ಪದಗ್ರಹಣದ: 3 ಕೆ.ಜಿ ಶುದ್ಧ ಬೆಳ್ಳಿಯಲ್ಲಿ ಅರಳಿದ ಕಮಲ, ಜಮ್ಮು ಅಭಿಮಾನಿಯಿಂದ ವಿಶೇಷ ಉಡುಗೊರೆ ಸಿದ್ಧ
ರಾಷ್ಟ್ರಪತಿ ಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲು ಮೈತ್ರಿ ಪಕ್ಷವಾಗಿ ಜೆಡಿಎಸ್​ ಕೈ ಜೋಡಿಸಿತ್ತು.
ಸಂಸದ ಎಚ್.​ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ. ಎಚ್​.ಡಿ ಕುಮಾರಸ್ವಾಮಿ ಅವರು ಇದಕ್ಕೂ ಮುನ್ನ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದರು. ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಎಚ್.​ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗುತ್ತಿದ್ದಾರೆ.
ನವದೆಹಲಿ: ಭಾರತದ ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೊದಲು ಇಂದು 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅವರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ.

ಬಾಂಗ್ಲಾ ಸಂಸದ ಹತ್ಯೆ ಪ್ರಕರಣ: ಬಂಗಾಳದ ಕಾಲುವೆಯಲ್ಲಿ ಮಾನವ ಮೂಳೆಗಳು ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
