ಬೆಂಗಳೂರು:ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ.ಕಳ್ಳನ ಮನಸ್ಸು ಹುಳ್ಳುಳ್ಳಗೆ.ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿ.ಕೆ. ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕುಟುಕಿದ್ದಾರೆ.
“ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ” ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಹತಾಶೆಯ ಹಳಹಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್‌ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ನಾನು ಐಟಿ ಪ್ರತಿನಿಧಿಯೂ ಅಲ್ಲ, ಈಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ.. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ? ಎಂದು ಕೆಣಕಿದ್ದಾರೆ.
40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ? ಎಂದು ಲೇವಡಿ ಮಾಡಿದ್ದಾರೆ.ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು!! ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 2 =
Remember me
