ಬೆಂಗಳೂರು:ನಾನು ಬಿಜೆಪಿ ವಕ್ತಾರ ಅಲ್ಲ, ಆರೂವರೆ ಕೋಟಿ ಜನರ ವಕ್ತಾರ. ಜನರ ಕಾವಲುಗಾರನಾಗಿ ನಾನು ಕೆಲಸ ಮಾಡುತ್ತೇನೆ. ನನ್ನ ದನಿಯನ್ನು ಉಡುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಗುಡುಗಿದರು.
ಜೆ.ಪಿ. ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದು ವಿರೋಧ ಪಕ್ಷದ ಸಾಮಾನ್ಯ ಸದಸ್ಯನಾಗಿ ಸರಿ, ತಪ್ಪು ಕೇಳೋದು ನನ್ನ ಕರ್ತವ್ಯ.
ತಮ್ಮನ್ನು ಬಿಜೆಪಿ ವಕ್ತಾರ ಎಂದು ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಅವರು, ಜನ ನನ್ನನ್ನು ಪ್ರತಿಪಕ್ಷ ಸ್ಥಾನದಲ್ಲಿ ಇರಿಸಿದ್ದಾರೆ. ಅವರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದೇ ನನ್ನ ಕೆಲಸ ಹಾಗೂ ಜನರ ಪರವಾಗಿ ನಾನು ದನಿಯೆತ್ತಲೇ ಬೇಕಿದೆ ಎಂದರು.
ಅಸಮಾನತೆಯ ಗ್ಯಾರಂಟಿ ನೀಡಿದ್ದಾರೆಕಾಂಗ್ರೆಸ್ ಪಕ್ಷದವರು ಸಮಾನತೆ ತರುತ್ತೇವೆ ಎಂದು ಹೇಳಿದ್ದಾರೆ. ಯಾವುದರಲ್ಲಿ ಸಮಾನತೆ ತರುತ್ತಾರೆ? ಪುಕ್ಕಟೆ ಕೊಡುವ ಮೂಲಕ ಎಲ್ಲರೂ ತಮ್ಮ ಮುಂದೆ ಕೈ ಒಡ್ಡುವಂತೆ ಮಾಡಿದ್ದಾರೆ. ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಬದಲು ಅವರು ಕೈ ಚಾಚಿ ನಿಲ್ಲುವಂತೆ ಮಾಡಿದ್ದಾರೆ. ಜನರನ್ನು ಕೈಯೊಡ್ಡಿ ನಿಲ್ಲಿಸುವ ವಿಚಾರದಲ್ಲಿ ಇವರು ಸಮಾನತೆ ಸಾಧಿಸುತ್ತಿದ್ದಾರೆ. ಇದಕ್ಕಿಂತ ದುಸ್ಥಿತಿ ಇನ್ನೇನಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹೆಜ್ಜೆ ಹೆಜ್ಜೆಗೂ ಈಸ್ಟ್ ಇಂಡಿಯಾ ಕಂಪನಿಸ್ವಾತಂತ್ರ್ಯಪೂರ್ವದಲ್ಲಿ ಒಂದೇ ಒಂದು ಈಸ್ಟ್ ಇಂಡಿಯಾ ಕಂಪನಿ ಇತ್ತು. ಈಗ ಹೆಜ್ಜೆಹೆಜ್ಜೆಗೂ ಅಂಥಾ ಕಂಪನಿಗಳು ಕಾಣುತ್ತಿವೆ. ರಾಷ್ಟ್ರೀಯ ಪಕ್ಷಗಳು ಈಸ್ಟ್ ಇಂಡಿಯಾ ಕಂಪನಿಗಳಂತೆ ಜನರನ್ನು ಸುಲಿಗೆ ಮಾಡುತ್ತಿವೆ ಎಂದು ಟೀಕಿಸಿದರು.ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿದರು. ಪಕ್ಷದ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಪಕ್ಷದ ಹಿರಿಯ ನಾಯಕರಾದ ನಾರಾಯಣ ರಾವ್, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿ ಅನೇಕ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.——————————
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 9 =
Remember me
