ಬೆಂಗಳೂರು:ಉಪ ಚುನಾವಣೆ ಘೋಷಣೆಗೂ ಮುನ್ನ ಚನ್ನಪಟ್ಟಣದ ಕದನ ಕೂತುಹಲ ನಿರೀಕ್ಷೆಗಳನ್ನು ಮೀರಿಸಿದ್ದು, ಚನ್ನಪಟ್ಟಣ ಉಪ ಚುನಾವಣೆ​ಗೆ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಮುಗಿಸಿ ಆಟವಾಡ್ತಿದ್ದಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು
ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.
ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣದಲ್ಲಿ ಉಪಚುನಾವಣೆ ಕಾವು ಹೆಚ್ಚಾಗಿದೆ. ಶತಾಯಗತಾಯವಾಗಿ ಕ್ಷೇತ್ರ ಗೆಲ್ಲಲು ನಿರಂತರ ಪ್ರವಾಸ ಕೈಗೊಳ್ಳುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದೂ ಕೂಡಾ ಚನ್ನಪಟ್ಟಣದ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು.
ಚನ್ನಪಟ್ಟಣದಲ್ಲಿ ಧ್ವಜಾರೋಹಣ ಸಂಬಂಧ ಮಾತನಾಡಿದ ಡಿಕೆಶಿ, ರಾಮನಗರದಲ್ಲೂ ಐದು ವರ್ಷ ಧ್ವಜಾರೋಹಣ ಮಾಡಿದ್ದೇನೆ. ಅಧಿಕಾರಿಗಳನ್ನ ಕೇಳಿದ್ದೆ, ಅವರು ಬಂದಿಲ್ಲ ಅಂದರು, ನಮ್ಮ ಡ್ಯೂಟಿ ನಾವು ಮಾಡಿದ್ದೇವೆ ಎಂದು ಹೇಳಿದರು. ಈ ಮೂಲಕ ಈ ಹಿಂದೆ 6 ವರ್ಷ ಕ್ಷೇತ್ರದ ಶಾಸಕರಾಗಿದ್ದ ಕೇಂದ್ರ ಸಚಿವ ಎಚ್‌ಡಿಕೆ ಒಂದು ಬಾರಿಯೂ ಕ್ಷೇತ್ರದಲ್ಲಿ ಧ್ವಜಾರೋಹಣ ಮಾಡಿಲ್ಲ ಎಂಬ ವಿಚಾರವನ್ನು ಇಟ್ಟುಕೊಂಡು ಹೆಚ್‌ಡಿಕೆಗೆ ಟಕ್ಕರ್ ಕೊಟ್ಟರು.
ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − 10 =
Remember me
