ಬೆಂಗಳೂರು:ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಕೆಲವೇ ಕ್ಷಣಗಳಲ್ಲಿ, ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಯುವತಿ ಕೂಡ ಹೇಳಿಕೆಯೊಂದನ್ನು ನೀಡಿ ಗೃಹಸಚಿವರು ರಕ್ಷಣೆ ಒದಗಿಸಬೇಕು ಎಂದು ಕೋರಿದ್ದಾಳೆ.
ಯುವತಿ ರಕ್ಷಣೆ ಕೋರಿರುವ ದೃಶ್ಯಾವಳಿ ಮಾಧ್ಯಮಗಳಿಗೆ ಸಿಕ್ಕಿದ್ದು, ಅದು ಎಲ್ಲೆಡೆ ಬಿತ್ತರವಾಗಿದೆ. ಇದರ ಬೆನ್ನಿಗೆ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಆ ಯುವತಿಯ ವಿಡಿಯೋ ನಾನು ನೋಡಿಲ್ಲ. ನಾನು ದೂರು ಕೊಟ್ಟ ಕೂಡಲೇ ವಿಡಿಯೋ ಹೊರಬರುತ್ತದೆ. ಇದರ ಹಿಂದೆ ಕೂಡ ಷಡ್ಯಂತ್ರವಿದೆ, ಯುವತಿ ದೂರು ಕೊಡುವುದಾದರೆ ಕೊಡಲಿ. ನಾನು ಫೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಮಧ್ಯೆ ಅವರು ಗೃಹಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿರುವ ಗೃಹಸಚಿವ ಬಸವರಾಜ ಬೊಮ್ಮಾಯಿ, ಆ ಯುವತಿ ಬಿಡುಗಡೆ ಮಾಡಿರುವ ವಿಡಿಯೋ ಗಮನಿಸಿಲ್ಲ, ಮಾಧ್ಯಮಗಳಲ್ಲಿ ಆ ಬಗ್ಗೆ ಸುದ್ದಿ ನೋಡಿದ್ದೇನೆ. ಆಕೆಯ ಕುಟುಂಬಕ್ಕೆ ಜೀವ ಭಯವಿದೆ ಎಂದಿರುವುದು ಗಮನಕ್ಕೆ ಬಂದಿದೆ. ಆಕೆಯ ಕುಟುಂಬಕ್ಕೆ ಸೂಕ್ತ ಭದ್ರತೆ ಕೊಡುವಂತೆ ಎಸ್ಐಟಿ ಮುಖ್ಯಸ್ಥರಿಗೆ ಹೇಳಿದ್ದೇನೆ. ಇನ್ನು ಸಿಡಿಯ ಸತ್ಯಾಸತ್ಯತೆ ಬಗ್ಗೆ ಎಸ್​ಐಟಿ ತನಿಖೆಗೆ ಸೂಚಿಸಿರುವುದರಿಂದ ಸದ್ಯದಲ್ಲೇ ಸತ್ಯಾಂಶ ಹೊರಬೀಳಲಿದೆ ಎಂದು ಗೃಹಸಚಿವರು ತಿಳಿಸಿದ್ದಾರೆ.
ಈಗ ನಟ-ನಟಿಯರು ಹೊರಬಂದಿದ್ದಾರೆ, ಮುಂದೆ ನಿರ್ಮಾಪಕ-ನಿರ್ದೇಶಕ ಹೊರಬರಲಿದ್ದಾರೆ: ರಮೇಶ್ ಜಾರಕಿಹೊಳಿ

ಜಾರಕಿಹೊಳಿಯಿಂದ ಮೋಸವಾಗಿದೆ, ನನಗೆ ರಕ್ಷಣೆ ಕೊಡಿ: ಹೊಸ ವಿಡಿಯೋದಲ್ಲಿ ‘ಸಂತ್ರಸ್ತ’ ಯುವತಿ ಮೊರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + thirteen =
Remember me
