ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರ ದೊಡ್ಡ ಸದ್ದು ಮಾಡಿರುವ ಬೆನ್ನಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ತಮಗೆ ಆ ಬಗ್ಗೆ ಗೊತ್ತಿಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿವೆ. ಜೆಡಿಎಸ್ ಮೈತ್ರಿಯನ್ನು ಬಿಜೆಪಿ ರಾಜ್ಯ ಮಟ್ಟದ ಘಟಾನುಘಟಿ ನಾಯಕರು ಉಮೇದಿನಿಂದ ಸ್ವಾಗತಿಸಿದ್ದಾರೆ.
ಆದರೆ ವಿಧಾನಸೌಧದಲ್ಲಿ ಮಾಧ್ಯಮದವರ ಜತೆ ಮಾತನಾಡಿರುವ ರೇವಣ್ಣ, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪಕ್ಷ ಸಂಘಟನೆ ಬಗ್ಗೆಯಷ್ಟೇ ಚರ್ಚೆಯಾಗಿದೆ. ಉಳಿದ ವಿಚಾರಗಳ ಬಗ್ಗೆ ಯಾವ ಚರ್ಚೆ ನಡೆದಿದೆಯೋ ಗೊತ್ತಿಲ್ಲ. ಈ ಬಗ್ಗೆ ಪಕ್ಷದ ವರಿಷ್ಟರು ಹೇಳಬೇಕು ಎಂದು ಹೇಳಿಕೆ ನೀಡಿದ್ದಾರೆ.ನಮ್ಮ ಪಕ್ಷ ಬೆಳವಣಿಗೆ ವಿಚಾರದಲ್ಲಿ ಪಕ್ಷದ ಮುಖಂಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾವುಗಳು ಬದ್ಧ ಎಂದು ರೇವಣ್ಣ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 16 =
Remember me
