ಬೆಂಗಳೂರು: ಪಕ್ಷದ ಮತ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಿದ್ದೇವೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳಲು ತಿಳಿಸಿದ್ದೇನೆ. ಉಳಿದಂತೆ ನನ್ನವರೆಗೂ ಯಾರದೇ ಪಕ್ಷ ಸೇರ್ಪಡೆ ವಿಚಾರ ಬಂದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ನೀವು ಬೇರೆ ಪಕ್ಷದ ಶಾಸಕರ ಜತೆ ಖುದ್ದಾಗಿ ಮಾತನಾಡಿದ್ದೀರಿ ಎಂಬ ಮಾತಿದೆಯಲ್ಲ ಎಂದು ಸುದ್ದಿ ಮಾಧ್ಯಮದವರು ಕೇಳಿದಾಗ, ನಿಮ್ಮ ಮಾಹಿತಿ ಸಂಪೂರ್ಣ ಸುಳ್ಳು ಎಂದರು.ಬಿಜೆಪಿಯವರು ಯಾರ ಜತೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ನೀವು ಚರ್ಚೆ ಮಾಡುತ್ತಿಲ್ಲ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ. ಅವರು ಕಲಿಸಿ ಕೊಟ್ಟಿರುವ ಪಾಠ ನಮಗೆ ನೆನಪಿದೆ. ಜನ ನಮಗೆ 135 ಸಂಖ್ಯಾಬಲ ನೀಡಿದ್ದಾರೆ. ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಬಿಜೆಪಿ ಹಾಗೂ ದಳದವರಿಗೆ ನೆಮ್ಮದಿ ಇಲ್ಲ. ಅದಕ್ಕೆ ಅವರೇ ಔಷಧಿ ಕಂಡುಕೊಳ್ಳಬೇಕು. ಗೆದ್ದಿರುವವರು, ಸೋತಿರುವವರು ಮಾತನಾಡುತ್ತಿದ್ದಾರೆ. ಯಾರು ಏನು ಮಾತನಾಡುತ್ತಿದ್ದಾರೆ ಎಂದು ನಾವು ಗಮನಿಸುತ್ತಿದ್ದೇವೆ. ನಾವು ಯಾರ ಮಾತಿಗೂ ಬೀಗ ಹಾಕುವುದಿಲ್ಲ ಎಂದು ತಿಳಿಸಿದರು.ಬಿಜೆಪಿ ನಾಯಕರು ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ಸಾಬೀತುಪಡಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.ಜೆಡಿಎಸ್‌ನ 13 ಶಾಸಕರು ನಿಮ್ಮ ಸಂಪರ್ಕದಲ್ಲಿದ್ದರೆಂಬ ಊಹಾಪೋಹ ಇದೆಯಲ್ಲ ಎಂಬ ಪ್ರಶ್ನೆಗೆ, ಈ ವಿಚಾರ ನನಗೆ ಗೊತ್ತಿಲ್ಲ. ನಿಮ್ಮಿಂದಲೇ ಈಗ ಮಾಹಿತಿ ಕೇಳುತ್ತಿದ್ದೇನೆ. ನನಗೆ 224 ಶಾಸಕರು ಪರಿಚಯಸ್ಥರು. ಎಲ್ಲರ ಜತೆ ರಾಜಕೀಯವಾಗಿ ಅಲ್ಲದಿದ್ದರೂ ವೈಯಕ್ತಿಕ ಸಂಬಂಧ ಇದೆ. ಅವರ ಹೆಸರಿಗೆ ನಾವು ಧಕ್ಕೆ ಯಾಕೆ ತರೋಣ? ಎಂದರು.ಪಕ್ಷ ಬಿಟ್ಟು ಹೋದವರು ಬಂದರೆ ಪಕ್ಷದ ಬಾಗಿಲು ತೆರೆದಿರುತ್ತದೆಯೇ ಎಂದು ಕೇಳಿದಾಗ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + 8 =
Remember me
