ರಾಮನಗರ:ಕರ್ನಾಟಕದ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಭಾವನೆಗಳ ಮೂಲಕ ಪ್ರಚಾರ ಮಾಡುತ್ತಿರುವ ಪಕ್ಷ ಜಾತ್ಯಾತೀತ ಜನತಾದಳ. ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಇಬ್ಬರೂ ಆಗಾಗ ಭಾವುಕಗೊಳಿಸುವ ಮಾತುಗಳನ್ನೇ ಮತಯಾಚನೆಯ ಅಸ್ತ್ರವಾಗಿ ಪ್ರಯೋಗಿಸುತ್ತಿದ್ದಾರೆ. ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಮತ್ತೊಮ್ಮೆ ಅಂಥದ್ದೇ ಮಾತನ್ನಾಡಿದ್ದಾರೆ.
ಇದನ್ನೂ ಓದಿ:ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಕಣ್ಣೀರು ಹಾಕಿಸುವಂತೆ ಮಾಡಿದ್ರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಎಚ್​.ಡಿ.ದೇವೇಗೌಡ
ಈ ವಯಸ್ಸಲ್ಲೂ ಹುರುಪಿನಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ದೇವೇಗೌಡರು ಇಂದು ಚನ್ನಪಟ್ಟಣದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್​ ಬಹಿರಂಗ ಸಭೆಯಲ್ಲಿ ತಮ್ಮ ಬತ್ತಳಿಕೆಯಲ್ಲಿನ ಭಾವನಾತ್ಮಕ ಅಸ್ತ್ರವೊಂದನ್ನು ಪ್ರಯೋಗಿಸಿದರು. ಕುಮಾರಸ್ವಾಮಿ ಇಷ್ಟು ಕೆಲಸ ಮಾಡಿದ್ದರೂ ನಾನು ಬಂದು ಓಟ್ ಕೇಳಬೇಕು. 90 ವರ್ಷದ ಈ ವಯಸ್ಸಿನಲ್ಲಿ ಒಂದು ಪ್ರಾದೇಶಿಕ ಪಕ್ಷವನ್ನ ಅಧಿಕಾರಕ್ಕೆ ತಂದು ಕಣ್ಣು ಮುಚ್ಚಬೇಕು ಎಂದು ಅವರು ಹೇಳಿದರು.
ಇದನ್ನೂ ಓದಿ:ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ
ಹಿಂದೂಸ್ತಾನದಲ್ಲಿ ರೈತರ ಸಾಲಮನ್ನಾ ಮಾಡಿದ ಏಕೈಕ ಸಿಎಂ ಕುಮಾರಸ್ವಾಮಿ. ಬಿಸಿಲ ಬೇಗೆಯಲ್ಲಿ ಕೆಲಸ ಮಾಡುವ ರೈತರಿಗೆ 5 ಸಾವಿರ ಮಾಸಾಶನ ಕೊಡಲು ಅವರು ನಿರ್ಧರಿಸಿದ್ದಾರೆ. ಕಾಶ್ಮೀರಕ್ಕೆ 10 ವರ್ಷ ಯಾವ ಪ್ರಧಾನಿಯೂ ಹೋಗಿರಲಿಲ್ಲ. ನಾನು ಆವಾಗ ಕಾಶ್ಮೀರಕ್ಕೆ ಹೋಗಿದ್ದೆ. ಹೋದರೆ ಹೊಡೆದು ಹಾಕುತ್ತಾರೆ ಎನ್ನುವ ಭಯವಿತ್ತು. ನಾನು ಸತ್ತರೆ ಹೊಳೆನರಸೀಪುರದಲ್ಲಿ ಮಣ್ಣು ಮಾಡುವಂತೆ ಹೇಳಿ ಹೋಗಿದ್ದೆ. ನಾಲ್ಕು ಬಾರಿ ಕಾಶ್ಮೀರಕ್ಕೆ ಹೋಗಿ ಅಲ್ಲಿ ಶಾಂತಿ ತಂದಿದ್ದೆ. ಮುಸ್ಲಿಂ ಬಾಂಧವರು ಇದನ್ನ ಅರ್ಥ ಮಾಡಿಕೊಳ್ಳಬೇಕು. ಮುಸ್ಲಿಂ ಸಮುದಾಯಕ್ಕೆ ರಿಜರ್ವೆಷನ್ ಕೊಟ್ಟಿದ್ದು ನಾವು ಎಂದೂ ದೇವೇಗೌಡರು ಹೇಳಿದರು.
ಇದನ್ನೂ ಓದಿ:ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ನಿಮ್ಮ ಹಳ್ಳಿಯ ರೈತನ ಮಗ ನಾನು ಬಂದು ನಿಮ್ಮ ಕಷ್ಟ ಆಲಿಸಿದ್ದೇನೆ. ಬಿಜೆಪಿಯ ಬಣ್ಣದ ಮಾತಿಗೆ ಮರುಳಾಗಬೇಡಿ. ಮಂಡ್ಯದಲ್ಲಿ ನಿಲ್ಲಲು ಕುಮಾರಸ್ವಾಮಿಗೆ ಹೇಳಿದ್ದರೂ ಅವರು ಅಲ್ಲಿ ನಿಲ್ಲಲಿಲ್ಲ. ಇದು ಅವರ ಕರ್ಮಭೂಮಿ, ಹಾಗಾಗಿ ಇಲ್ಲೇ ಸ್ಪರ್ಧೆ ಮಾಡಿದ್ದಾರೆ. ಇದೇ 10ನೇ ತಾರೀಕು ನೀವು ಕುಮಾರಣ್ಣನ ಮರೆಯಬಾರದು. ಯಾರು ಎಷ್ಟೇ ದುಡ್ಡು ಕೊಟ್ಟು ಅಪಪ್ರಚಾರ ಮಾಡಬಹುದು, ಯಾರೂ ತಲೆಕೆಡಿಸಿಕೊಳ್ಳಬೇಡಿ. ಕುಮಾರಸ್ವಾಮಿ ಅವರನ್ನ ಗೆಲ್ಲಿಸಲು ನೀವೆಲ್ಲ ಪಣತೊಡಿ ಎಂದು ಮಾಜಿ ಪ್ರಧಾನಿ ಕರೆ ನೀಡಿದರು.
ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 + three =
Remember me
