ಬೆಂಗಳೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅರಿವು ಕೇಂದ್ರಗಳಲ್ಲಿ ‘ನಾನು ಓದುವ ಪುಸ್ತಕ’ ಅಭಿಯಾನ ಆರಂಭಿಸಲಾಗಿದೆ.
ಮಕ್ಕಳು ಓದು ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ವಿನೂತನ ಕಾರ್ಯಕ್ರಮ ರೂಪಿಸಲಾಗಿದ್ದು, ಎಲ್ಲ ಗ್ರಾ.ಪಂ.ಗಳಲ್ಲಿ ಸೆ.1 ರಿಂದ ಚಾಲನೆ ನೀಡಲಾಗಿದೆ.
ಈ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ.
ಅರಿವು ಕೇಂದ್ರಗಳನ್ನು ಗ್ರಾಮೀಣ ಜ್ಞಾನ ಕೇಂದ್ರಗಳನ್ನಾಗಿಸಲು ಅರಿವು ಕೇಂದ್ರಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಈಗ ಓದುವ ಬೆಳಕು ಕಾರ್ಯಕ್ರಮದಡಿ ಗ್ರಾಮ ಪಂಚಾಯಿತಿ ‘ಅರಿವು ಕೇಂದ್ರ’ಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಲಾಗುತ್ತಿದೆ. ಈ ಕೇಂದ್ರಗಳಿಗೆ ಭೇಟಿ ನೀಡುವ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸಲು ಸೆಪ್ಟೆಂಬರ್ ತಿಂಗಳಲ್ಲಿ ನಾನು ಓದುವ ಪುಸ್ತಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಸೆ.5 ರಂದು ಶಿಕ್ಷಕರ ದಿನ, ಸೆ.8 ರಂದು ಅಂತಾರಾಷ್ಟ್ರೀಯ ಅಜ್ಜಿ-ತಾತಂದಿರ ದಿನ, 15 ರಂದು ಅತಾರಾಷ್ಟೀಯ ಪ್ರಜಾಪ್ರಭುತ್ವ ದಿನ ಹಾಗೂ ರಾಷ್ಟ್ರೀಯ ಇಂಜಿನಿಯರ್‌ಗಳ ದಿನಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಈ ಅಭಿಯಾನವನ್ನು ಆಯೋಜಿಸಲಾಗಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twelve − 10 =
Remember me
