ಮೈಸೂರು:ಸಿದ್ದರಾಮಯ್ಯಗೆ ಕಲ್ಲುಬಂಡೆಯಾಗಿ ನಿಂತಿದ್ದೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಹಿಂದೆ ನನಗೂ ಇದೇ ರೀತಿ ಡಿಕೆಶಿ ಹೇಳಿದ್ದರು. ಆ ಬಂಡೆಯನ್ನು ನಂಬಿ ನಾನು ಕೆಟ್ಟಿದ್ದೆ ಎಂದು ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ: ಮಾಜಿ ಸಿಎಂ ಯಡಿಯೂರಪ್ಪ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ, ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಪಡೆದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 8 ಸ್ಥಾನ ಪಡೆದದ್ದು ಯಾಕೆ ಎಂದು ಪ್ರಶ್ನಿಸಿದರು. ಆದರೆ, 9ನೇ ಸ್ಥಾನ ಹೇಗೆ ಬಂತೆಂದು ನನಗೂ ಗೊತ್ತಿದೆ ಎಂದು ನುಡಿದರು.
ನನ್ನ ಕಂಡರೆ ಹೊಟ್ಟೆ ಉರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಒಳ್ಳೆಯ ಆಡಳಿತ ನೀಡಿದರೆ ನಮಗೆ ಯಾಕೆ ಹೊಟ್ಟೆಉರಿ. ನನ್ನ ಮೇಲೆ ಒಂದು ಕಪ್ಪುಚುಕ್ಕೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಸಿದ್ದರಾಮಯ್ಯ ಹಿಂದುಳಿದ ವರ್ಗದ ಮುಖ್ಯಮಂತ್ರಿ ಅಲ್ಲ, ಆರೂವರೆ ಕೋಟಿ ಜನರ ಮುಖ್ಯಮಂತ್ರಿ.ಖಾಕಿ ಚಡ್ಡಿ ಹಾಕಿದ್ದಾರೆಂದು ಎಂದು ನನ್ನ ಬಗ್ಗೆ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸೈಟ್​ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ.  ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಆದರೆ, ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡ್ತಿರಲಿಲ್ಲ. ಸಿದ್ದರಾಮಯ್ಯಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಸಿಎಂ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ಸೈಟ್​ ವಾಪಸ್​ ಕೊಡಲು ಸಿದ್ಧ ಎಂದಿದ್ದಾರಂತೆ. ಸೈಟ್ ವಾಪಸ್​ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವಾ ಎಂದು ಎಚ್​ಡಿಕೆ ಪ್ರಶ್ನೆ ಮಾಡಿದರು.
ಯಡಿಯೂರಪ್ಪ, ನನ್ನ ನಡುವೆ ಬಿರುಕು ಉಂಟು ಮಾಡಲು ಯತ್ನ: ನನ್ನ, ಯಡಿಯೂರಪ್ಪ ನಡುವೆ ಬಿರುಕು ಉಂಟು ಮಾಡಲು ಯತ್ನಿಸುತ್ತಿದ್ದಾರೆ. ನನ್ನ, ಬಿಎಸ್​ವೈ ನಡುವಿನ ಟಾಕ್​ವಾರ್​ ರಾಜಕೀಯವಾದದ್ದು, ಬಿಜೆಪಿ, ಜೆಡಿಎಸ್​​ನವರು ಉತ್ತಮವಾದ ಆಡಳಿತ ನೀಡಿದ್ದೇವೆ. ಆದರೆ, ವೈಯಕ್ತಿಕವಾಗಿ ಟೀಕೆ ಮಾಡಿಲ್ಲ ಎಂದರು.
ಕುಮಾರಸ್ವಾಮಿಯವರ ಸೂಚನೆಯಂತೆ ವಿಸಿಪಿ ಮತ್ತು ಟಿವಿ ಮೂಲಕ ಡಿ.ಕೆ.ಶಿವಕುಮಾರ್ ಬಿಎಫ್, ಗಿಎಫ್ ಮೂಲಕ ಹಣ ಮಾಡಿದ್ದನ್ನು ತಿಳಿಸುವ ವಿಡಿಯೋವನ್ನು ಜನರ ಮುಂದಿಡಲಾಯಿತು. ಡಿ.ಕೆ.ಶಿವಕುಮಾರ್, ಕೊತ್ವಾಲ್ ರಾಮಚಂದ್ರನ ಕೈಕಾಲು ಒತ್ತಿದ್ದ ಕುರಿತ ಮಾಹಿತಿಯ ವಿಡಿಯೋವನ್ನೂ ಪ್ರದರ್ಶಿಸಲಾಯಿತು.
ತಿಹಾರ್ ಜೈಲು ಸೇರಿದ ಡಿಕೆಶಿ ಕುರಿತ ವಿವರವನ್ನು ವಿಡಿಯೋ ಮೂಲಕ ಜನರ ಮುಂದಿಡಲಾಯಿತು. ದಲಿತ ಕುಟುಂಬದ ಮೇಲೆ ದೌರ್ಜನ್ಯ ಮಾಡಿದ ವಿವರವನ್ನೂ ನೀಡಲಾಯಿತು. ಕಾಂಗ್ರೆಸ್ ಭ್ರಷ್ಟಾಚಾರದ ಕುರಿತ ಅದೇ ಪಕ್ಷದ ಜನಾರ್ದನ ಪೂಜಾರಿ, ಮಾರ್ಗರೆಟ್ ಆಳ್ವ, ಬಿ.ಕೆ.ಹರಿಪ್ರಸಾದ್, ರಮೇಶ್‌ಕುಮಾರ್ ಮೊದಲಾದ ಮುಖಂಡರು ಮಾತನಾಡಿದ ವಿಡಿಯೋಗಳನ್ನು ಪ್ರದರ್ಶಿಸಲಾಯಿತು.
ಕುಮಾರಸ್ವಾಮಿ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
