ಬೆಂಗಳೂರು:ಯಾವುದೇ ಕಾರಣಕ್ಕೂ ಸದಸ್ಯನಾಗಿ ರಾಜ್ಯಸಭೆ ಪ್ರವೇಶ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಜೂನ್​ನಲ್ಲಿ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳು ಖಾಲಿಯಾಗಲಿದ್ದು, ಅದರಲ್ಲಿ ಒಂದು ಸ್ಥಾನಕ್ಕೆ ಕಾಂಗ್ರೆಸ್ ನೆರವಿನೊಂದಿಗೆ ದೇವೇಗೌಡರು ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿತ್ತು. ಆದರೆ, ಜೆಪಿ ಭವನದಲ್ಲಿ ಪಕ್ಷದ ಮುಖಂಡರೊಂದಿಗೆ ಮಾತನಾಡಿ, ಯಾವ ಕಾರಣಕ್ಕೂ ರಾಜ್ಯಸಭೆ ಪ್ರವೇಶ ಮಾಡುವುದಿಲ್ಲ ಎಂದಿದ್ದಾರೆ. ನಾನು ಬಡವರ ಪರ ಹೋರಾಡಲು ರಾಜ್ಯಸಭೆ ಸದಸ್ಯನಾಗಬೇಕಿಲ್ಲ.
ಎಲ್ಲಿದ್ದರೂ ಹೋರಾಟ ಮಾಡುತ್ತೇನೆ. ನನ್ನ ಜೀವನವೇ ಹೋರಾಟ. ನನಗೆ ಅಧಿಕಾರದ ದಾಹ ಇಲ್ಲ. ರಾಜ್ಯಸಭೆ ಸದಸ್ಯರಾಗುವ ಬಗ್ಗೆ ವದಂತಿ ಹರಡಿದೆ. ಅದರ ಮೇಲೆ ಮಾಧ್ಯಮಗಳು ವಿಶ್ಲೇಷಣೆ ಮಾಡುತ್ತಿವೆ. ದೇವೇಗೌಡರಿಗೆ ಅಧಿಕಾರ ದಾಹ ಇನ್ನೂ ಹೋಗಿಲ್ಲ ಎನ್ನುತ್ತಾರೆ. ನನ್ನ ಜೀವನದಲ್ಲಿ ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡು ಕೂತವನಲ್ಲ. ನಾನು ರಾಜ್ಯಸಭೆ ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲೀಲಾವತಿ ಆರ್. ಪ್ರಸಾದ್, ದೇವೇಗೌಡರು ರಾಜ್ಯಸಭೆಗೆ ಪ್ರವೇಶಿಸಬೇಕು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡಬೇಕು. ದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು. ಮಹಿಳಾ ಮೀಸಲಾತಿಯನ್ನು ಕೊಡಿಸಬೇಕು. ದೇವೇಗೌಡರು ರಾಜ್ಯಸಭೆಗೆ ಹೋಗಬೇಕು ಎಂದು ಹೇಳಿದಾಗ ಈ ಸ್ಪಷ್ಟನೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 7 =
Remember me
