ಬೆಂಗಳೂರು:ಸದ್ಯದಲ್ಲೇ ರಚನೆಯಾಗಲಿರುವ ರಾಜ್ಯ ಸಚಿವ ಸಂಪುಟಕ್ಕೆ ತಾವು ಸೇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ವಿಷಯ ತಿಳಿಸಿದ್ದೇನೆ. ನಾನು ಮಾಜಿ ಸಿಎಂ ಮತ್ತು ಹಿರಿಯ ಆಗಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಅವರು ಹೇಳಿದ್ದಾರೆ.
ನಾನು ಕೆಳಮಟ್ಟದಿಂದ ಬೆಳೆದು ಬಂದ ಒಬ್ಬ ಕಾರ್ಯಕರ್ತ. ಮೇಲ್ಮಟ್ಟದ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಪಕ್ಷವನ್ನು ಕಟ್ಟಿದ್ದೇನೆ. ಈ ಹಂತದಲ್ಲಿ ಸಚಿವನಾಗಲು ನಾನು ಒಪ್ಪುವುದಿಲ್ಲ. ಪಕ್ಷದ ಕೆಲಸವನ್ನು ಹೈಕಮಾಂಡ್‌ನವರು ಕೊಟ್ಟರೆ ಸಂತೋಷದಿಂದ ನಿರ್ವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಶೆಟ್ಟರ್ ಅವರ ಈ ನಿರ್ಧಾರದ ಕುರಿತು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಅದು ನನ್ನ ಗಮನಕ್ಕೆ ಬಂದಿಲ್ಲ. ಸಚಿವ ಸಂಪುಟ ರಚನೆ ಕುರಿತು ಸದ್ಯದಲ್ಲೇ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠ ನಾಯಕರ ಜತೆ ಚರ್ಚಿಸುತ್ತೇನೆ ಎಂದಷ್ಟೇ ಹೇಳಿದರು.
ಬೆಳ್ಳಿ ಗೆದ್ದರೂ ಖುಷಿ ಪಡದೆ ಅಳುತ್ತಾ, ಕ್ಷಮೆ ಕೇಳಿದ ಕ್ರೀಡಾಪಟುಗಳು! 17 ವರ್ಷಗಳ ದಾಖಲೆ ಮುರಿದುಬಿತ್ತು!

ರಾಜ್ಯದಲ್ಲಿಂದು 1,531 ಕರೊನಾ ಕೇಸ್; 19 ಜಿಲ್ಲೆಗಳಲ್ಲಿ ಮರಣ ಪ್ರಕರಣ ‘ಶೂನ್ಯ’

ಪಾಕಿಸ್ತಾನದ ಕರಾಚಿಯಲ್ಲಿ ಇಬ್ಬರು ಚೀನಾ ಪ್ರಜೆಗಳ ಮೇಲೆ ಗುಂಡಿನ ದಾಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
