ಬೆಂಗಳೂರು:ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ಗೆ ನಗರದ 23ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯಡಿ ಸ್ಥಾಪಿತಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಲಕ್ಷ್ಮೀನಾರಾಯಣ್ ಭಟ್ ಅವರು ಶನಿವಾರ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಯು ಕಾನೂನುಬದ್ಧವಾಗಿ ಪಡೆಯಬಹುದಾದ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ, ತನಿಖಾಧಿಕಾರಿಯ ಅನುಮತಿ ಪಡೆಯದೇ ರಾಜ್ಯ ತೊರೆಯುವಂತಿಲ್ಲ. ನ್ಯಾಯಾಲಯದ ಅನಮತಿ ಇಲ್ಲದೆ ದೇಶ ತೊರೆಯುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿದೆ.
ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ಬಾಕಿ ಇದ್ದರೂ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ನಿಯಮಗಳ ಪ್ರಕಾರ ಅರ್ಜಿದಾರರು ಡಿಫಾಲ್ಟ್ ಜಾಮೀನು ಕೋರಲು ಯಾವುದೇ ನಿರ್ಬಂಧವಿಲ್ಲ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತಿಳಿಸಿತ್ತು. ಇದರಿಂದ, ಮಂಜುನಾಥ್ ಡಿಫಾಲ್ಟ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣವೇನು?:ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಸೀಲ್ದಾರ್ ಆಗಿದ್ದ ಪಿ.ಎಸ್.ಮಹೇಶ್ ಹಾಗೂ ಚೇತನ್ ಕುಮಾರ್ ಅಲಿಯಾಸ್ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಇದೇ ಪ್ರಕರಣದಲ್ಲಿ ಜು.4ರಂದು ಬಂಧನಕ್ಕೊಳಗಾಗಿರುವ ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಜು.11ರಂದು ವಜಾಗೊಳಿಸಿತ್ತು. ಬಳಿಕ ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಹ ಆ.3ರಂದು ಮಂಜುನಾಥ್‌ಗೆ ಜಾಮೀನು ನಿರಾಕರಿಸಿತ್ತು.
ಮದ್ಯದ ಅಮಲಿನಲ್ಲಿ ಗಣೇಶನ ಮೂರ್ತಿಗಳನ್ನು ಚೆಲ್ಲಾಡಿ ವಿರೂಪಗೊಳಿಸಿದ ಯುವಕರು; ಐವರ ಬಂಧನ..

ಜನಜಂಗುಳಿಯಿಂದಾಗಿ ಕುಸಿದು ಬಿತ್ತು ಗಣೇಶನ ಗೋಲ್ಡನ್ ಟೆಂಪಲ್​!

ಬರ್ತ್​​ಡೇಗೆ ಕೇಕು-ಹೂಗುಚ್ಛ ಬೇಡ, 18 ಪದಗಳೇ ಸಾಕು: ಅಭಿಮಾನಿಗಳಲ್ಲಿ ವಿಶಿಷ್ಟ ಬೇಡಿಕೆ ಇಟ್ಟ ಉಪೇಂದ್ರ!

ಕಾರು ಅಪಘಾತಕ್ಕೆ ದಂಪತಿ ಬಲಿ; ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಮಗನೂ ಇಂದು ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 3 =
Remember me
