ಬೆಂಗಳೂರುಬಸವನಗುಡಿಯಲ್ಲಿರುವ ಬಿ.ಎಂ. ಶ್ರೀನಿವಾಸಯ್ಯ ಎಜುಕೇಷನಲ್ ಟ್ರಸ್ಟ್ (ಬಿಎಂಎಸ್‌ಇಟಿ) ಆಡಳಿತ ಮಂಡಳಿ ಟ್ರಸ್ಟಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿ. ರಶ್ಮಿ ಮಹೇಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಶ್ಮಿ ಮಹೇಶ್ ಸರ್ಕಾರದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇವರ ಅವಧಿಯು ಮುಂದಿನ 4 ವರ್ಷ ಅಥವಾ ಮುಂದಿನ ಆದೇಶದವರೆಗೆ ಇರಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಯನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧರಿಸಲಾಗಿತ್ತು. ಆದರೆ, ಈ ವರೆಗೆ ಯಾವುದೇ ಸಮಿತಿ ರಚನೆ ಮಾಡಿರಲಿಲ್ಲ. ಈಗ ಸರ್ಕಾರದ ಪ್ರತಿನಿಧಿಯಾಗಿ ಆಡಳಿತ ಮಂಡಳಿ ಟ್ರಸ್ಟಿಯನ್ನು ನೇಮಕ ಮಾಡಿದೆ.
ಬಿಜೆಪಿ ಸರ್ಕಾರದ ವಿರುದ್ಧ ಎಚ್ಡಿಕೆ ಆರೋಪ:
ಸಾರ್ವಜನಿಕ ಟ್ರಸ್ಟ್ ಆಗಿರುವ ಬಿಎಂಎಸ್ ಕಾಲೇಜನ್ನು ಖಾಸಗೀಕರಣ ಮಾಡಲು ಸರ್ಕಾರ ಹೊರಟಿದೆ. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ವ್ಯಕ್ತಿಯೊಬ್ಬರ ಹೆಸರಿಗೆ ನೋಂದಣಿ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಈ ಅಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ನೇರ ಆರೋಪ ಮಾಡಿದ್ದರು.
ಈ ಆರೋಪವು ಸದನದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕುಮಾರಸ್ವಾಮಿ ಪರ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಕೂಡ ದನಿಗೂಡಿಸಿದ್ದರು. ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
