ಬೆಂಗಳೂರು:ಅಕ್ರಮ ಜಾನುವಾರು ಸಾಗಿಸುವವರ ವಿರುದ್ದ ಧ್ವನಿ ಎತ್ತಿದ್ದ ಹಿನ್ನೆಲೆಯಲ್ಲಿ ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‍ ಸೇರಿದಂತೆ 13 ಮಂದಿ ಐಎಎಸ್‌ ಅಧಿಕಾರಿಗಳನ್ನು ಬೇರೆಬೇರೆ ಕಡೆಗಳಲ್ಲಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುವವರ ಮೇಲೆ ಹಾಗೂ ಜಾನುವಾರು ರಕ್ಷಣೆ ಬರುವ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಇವರು ಹೇಳಿದ ಬೆನ್ನಲ್ಲೇ ‘ರಾಮ್ ಸೇನಾ ಅಭಿಮಾನಿ ಬಳಗ’ ಎನ್ನುವ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ‘ಇವಳನ್ನು ಕೊಲ್ಲಬೇಕು’ ಎಂದು ತುಳುಭಾಷೆಯಲ್ಲಿ ಬೆದರಿಕೆ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಇದರ ಬೆನ್ನಲ್ಲೇ ಅವರಿಗೆ ಈಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನೇಮಕಗೊಳಿಸಲಾಗಿದೆ.
ಇವರನ್ನು ಹೊರತುಪಡಿಸಿ ಇನ್ನೂ 12 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಅದರ ವಿವರ ಹೀಗಿದೆ. ಕೊರನಾ ವೈರಸ್‌ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಇಬ್ಬರನ್ನು ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ರಾಜಕುಮಾರ್ ಕತ್ರಿ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆಡಾ.ಎನ್. ನಾಗಾಂಬಿಕಾ ದೇವಿ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಮನೋಜ್ ಜೈನ್- ಬಿಬಿಎಂಪಿ ವಿಶೇಷ ಆಯುಕ್ತರುರಾಜೇಂದ್ರ ಜೋಳನ್- ಬಿಬಿಎಂಪಿ ವಿಶೇಷ ಆಯುಕ್ತರುಆರ್. ವಿನೋತ್ ಪ್ರಿಯಾ – ನಿರ್ದೇಶಕರು, ಎಂಎಸ್​ಎಂಇಡಾ.ಬಿ.ಆರ್.ಮಮತಾ- ಹೆಚ್ಚುವರಿ ನಿರ್ದೇಶಕರು, ಸಕಾಲಪೊಮ್ಮಲ ಸುನೀಲ್ ಕುಮಾರ್- ವಿಜಯಪುರ ಜಿಲ್ಲಾಧಿಕಾರಿಡಾ.ರಾಜೇಂದ್ರ ಕೆ.ವಿ. – ದಕ್ಷಿಣ ಕನ್ನಡ ಜಿಲ್ಲಾಧಿಕಾರಿದರ್ಶನ್ ಎಚ್​.ಪಿ.- ಬೆಳಗಾವಿ ಜಿಪಂ ಸಿಇಒಡಾ.ಎಚ್.ಎನ್.ಗೋಪಾಲಕೃಷ್ಣ- ನಿರ್ದೇಶಕರು, ಮೈಸೂರು ಶುಗರ್ಸ್ ಕಂಪನಿ ಲಿ.ಕವಿತಾ ಎಸ್. ಮಣ್ಣೀಕೆರಿ- ಚಿತ್ರದುರ್ಗ ಜಿಲ್ಲಾಧಿಕಾರಿಪಾಟೀಲ ಯಲಗೌಡ ಶಿವನಗೌಡ – ಜಂಟಿ ನಿರ್ದೇಶಕ, ಆಡಳಿತ ತರಬೇತಿ ಸಂಸ್ಥೆ, ಮೈಸೂರು


ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 1 =
Remember me
