ಬೆಂಗಳೂರು:ಕರೋನೋತ್ತರ ಬಜೆಟ್ ಹೊಸ್ತಿಲಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದು, ಸವಾಲಿನ ದಿನಗಳನ್ನು ನಿಭಾಯಿಸಲು ನಿಷ್ಠುರ ನಡೆ ಅನಿವಾರ್ಯವೆಂಬ ಸಂದೇಶ ರವಾನಿಸಿದ್ದಾರೆ. ಕ್ರಿಯಾಶೀಲ ಹಾಗೂ ಸರ್ಕಾರಕ್ಕೆ ಹೆಸರು ತರಬಲ್ಲಂತಹ ಅಧಿಕಾರಿಗಳಿಗೆ ಪ್ರಮುಖ ಇಲಾಖೆಗಳ ಜವಾಬ್ದಾರಿ ಕೊಡುವ ಮೂಲಕ ತಮ್ಮ ಇರಾದೆ ಏನೆಂಬುದು ಬಿಎಸ್​ವೈಸ್ಪಷ್ಟಪಡಿಸಿದ್ದು, ಮುಂದಿನ ಬಜೆಟ್ ಪರಿಣಾಮಕಾರಿ ಅನುಷ್ಠಾನಕ್ಕೆ ಆಡಳಿತ ಯಂತ್ರಾಂಗವನ್ನು ಸಜ್ಜುಗೊಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.
41 ಐಎಎಸ್​ಗಳ ಸ್ಥಾನ ಪಲ್ಲಟ:ಹಿರಿಯ ಅಧಿಕಾರಿ ವಿ.ರಶ್ಮಿ ಮಹೇಶ್​ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದ್ದರೆ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್​ಗೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮ ಪ್ರಭಾರ ವಹಿಸಲಾಗಿದೆ. ಆರೋಗ್ಯ ಇಲಾಖೆ ಆಯುಕ್ತರಾಗಿದ್ದ ಪಂಕಜ್​ಕುಮಾರ್ ಪಾಂಡೆ, ಬೆಂಗಳೂರು ನಗರ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಗಳು ಸೇರಿ ಒಟ್ಟು 41 ಐಎಎಸ್ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ಇಲಾಖೆಗಳು, ಬಿಬಿಎಂಪಿ ಸಹಿತ ಜಿಲ್ಲಾ ಆಡಳಿತಕ್ಕೂ ಸರ್ಜರಿ ಮಾಡಲಾಗಿದೆ.
ವಿ.ರಶ್ಮಿ ಮಹೇಶ್-ಪ್ರಧಾನ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twenty − eighteen =
Remember me
