ಬೆಂಗಳೂರುರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿ ನಿವೃತ್ತಿಹೊಂದುವ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿಗೆ ನಿವೃತ್ತಿ ವೇಳೆ 40 ಸಾವಿರ ರೂ.ಗಳ ಮೊತ್ತವನ್ನು ನೀಡಲು ರಾಜ್ಯ ಸರ್ಕಾರವು ಒಪ್ಪಿಗೆ ನೀಡಿದೆ.
ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿಯು 60 ವರ್ಷ ವಯೋಮಿತಿ ಪೂರೈಸಿ ಕರ್ತವ್ಯದಿಂದ ಬಿಡುಗಡೆಗೊಳ್ಳುವ ಅಡುಗೆ ಸಿಬ್ಬಂದಿಗೆ ಒಂದು ಬಾರಿಯ ‘ಇಡಿಗಂಟು’ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ, ಸರ್ಕಾರದ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಹಣಕಾಸು ಇಲಾಖೆಯು ‘ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ನೇಮಕಗೊಂಡ ಸಿಬ್ಬಂದಿಗೆ ಅನ್ವಯವಾಗಲಿದೆ ಎಂದು ತಿಳಿಸಿದೆ.
ಯಾರಿಗೆಲ್ಲ ಸಿಗಲಿದೆ ಮೊತ್ತ?
60 ವರ್ಷ ಪೂರ್ಣಗೊಂಡ ನಂತರ ಕರ್ತವ್ಯದಿಂದ ಬಿಡುಗಡೆಗೊಳ್ಳುವ ಅಡುಗೆ ಸಿಬ್ಬಂದಿಗೆ 40 ಸಾವಿರ ರೂ.ಗಳ ಇಡಿಗಂಟು ಮೊತ್ತವನ್ನು ನೀಡಲಾಗುತ್ತದೆ. 5 ವರ್ಷಕ್ಕಿಂತ ಮೇಲ್ಪಟ್ಟು ಮತ್ತು 15 ವರ್ಷಕ್ಕಿಂತ ಕಡಿಮೆ ಅವಧಿಗೆ ಸೇವೆ ಸಲ್ಲಿಸಿದ 60 ವರ್ಷ ವಯೋಮಿತಿ ತುಂಬಿದವರಿಗೆ 30 ಸಾವಿರ ರೂ.ಗಳನ್ನು ನೀಡಲಾಗುತ್ತದೆ. ಕನಿಷ್ಠ 5 ವರ್ಷ ಸೇವೆಯನ್ನು ಪೂರ್ಣಗೊಳಿಸದ ಅಡುಗಡ ಸಿಬ್ಬಂದಿಗೆ ಒಂದು ಬಾರಿಯ ಇಡಿಗಂಟು ಸೌಲಭ್ಯ ಲಭ್ಯವಿರುವುದಿಲ್ಲ.
ಏಕೆ ಈ ಯೋಜನೆ?
ಮಧ್ಯಾಹ್ನದ ಊಟದ ಯೋಜನೆಯಡಿ ರಾಜ್ಯಾದ್ಯಂತ 1.20 ಲಕ್ಷ ಕಾರ್ಯಕರ್ತರು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. 55 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ನಿಯಮಿತವಾಗಿ ಆಹಾರವನ್ನು ತಯಾರಿಸಿ ಬಡಿಸುತ್ತಿದ್ದಾರೆ. ಇವರಲ್ಲಿ ಸಾವಿರಾರು ಮಂದಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತಿಯ ಅಂಚಿನಲ್ಲಿದ್ದಾರೆ. ಆದರೆ, ಈ ಕಾರ್ಯಕರ್ತರು ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರಣ ನಿವೃತ್ತಿ ಸಮಯದಲ್ಲಿ ಆರ್ಥಿಕವಾಗಿ ಪಿಎ್/ಗ್ರಾಚ್ಯುಟಿ ಸೌಲಭ್ಯಗಳು ದೊರೆಯುವುದಿಲ್ಲ.
ಆದ್ದರಿಂದ 60 ವರ್ಷಗಳ ಸೇವಾವಧಿ ಪೂರ್ಣಗೊಳಿಸಿ ಸೇವೆಯಿಂದ ಬಿಡುಗಡೆಗೊಂಡಿರುವ ಏಕರೂಪದ ಒಂದು ಲಕ್ಷ ರೂ.ಮೊತ್ತ ಹಾಗೂ ಮಾಸಿಕ ವೇತನ ಹೆಚ್ಚಳ ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವು ವರ್ಷಗಳಿಂದ ಮಧ್ಯಾಹ್ನದ ಬಿಸಿಯೂಟ ಕಾರ್ಯಕರ್ತರು ಬೇಡಿಗಳನ್ನಿಟ್ಟಿದ್ದರು. ಈ ಎಲ್ಲ ಕಾರಣಗಳಿಂದ ಸರ್ಕಾರವು ಸಣ್ಣಮೊತ್ತವನ್ನು ನೀಡಲು ಅನುಮತಿ ನೀಡಿದೆ. ಪ್ರಸ್ತುತ ಬಿಸಿಯೂಟ ಸಿಬ್ಬಂದಿಗೆ ಮಾಸಿಕ 3,600 ರೂ. ಗೌರವಧನ ನೀಡಲಾಗುತ್ತಿದೆ.
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:five × three =
Remember me
