ಬೆಂಗಳೂರು:ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್​ಡೌನ್, ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.
ಇಂದು ಬೆಳಗ್ಗೆ ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ:ಸಚಿವ ಸುಧಾಕರ್ ತಂದೆಗೆ ಕರೊನಾ ಸೋಂಕು ಬೆನ್ನಲ್ಲೇ ಪತ್ನಿ, ಮಗಳಿಗೂ ಮಹಾಮಾರಿ ಕಂಟಕ
ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಟೀಕಿಸಿದರು.
ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.‌1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)June 23, 2020

ಕರೊನಾಗೆ ಹೆದರಿ ಬಸ್​ನಲ್ಲೇ ನೇಣುಬಿಗಿದುಕೊಂಡು ಪೊಲೀಸ್ ಕಾನ್ಸ್​ಟೇಬಲ್​ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
