ಮೈಸೂರು:ನಿನ್ನೆ ಮೈಸೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕುರಿತಾಗಿ ಇಂದು ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್​​ನವರದ್ದು, ತಾಲಿಬಾನ್ ಸರ್ಕಾರ ಹೇಳಿಕೆ ವಿಚಾರ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೌದು, ನಾನು ಕಾಂಗ್ರೆಸ್ ಕುರಿತು ಈ ಹೇಳಿಕೆ ನೀಡಿದ್ದೇನೆ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬರುತ್ತದೆ. ಕಪಾಲಿ ಬೆಟ್ಟವನ್ನು ಯೇಸು ಬೆಟ್ಟ ಮಾಡುತ್ತಾರೆ. ಆ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ:BJP ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಪ್ರತಾಪ್ ಸಿಂಹ
ಸಿದ್ದರಾಮಯ್ಯ ಅವರು ಕೆಎಫ್‌ಡಿ, ಪಿಎಫ್‌ಐ ಮೇಲಿನ ಕೇಸ್ ವಾಪಸ್ ತೆಗೆದುಕೊಂಡರು. ಅದರ ಪರಿಣಾಮವಾಗಿ 175 ಕೇಸ್‌ಗಳನ್ನು ವಾಪಸ್ ತೆಗೆದುಕೊಳ್ಳಬೇಕಾಯಿತ್ತು. ಹೀಗಾಗಿ ಹಿಂದುಪರ ಸಂಘಟನೆಗಳ ಕಾರ್ಯಕರ್ತರ ಕೊಲೆಯಾಯಿತು ಎಂದು ಹೇಳಿದ್ದಾರೆ.
ಮೋದಿ ನಮ್ಮ ಪ್ರಧಾನಿಯಾಗಿರಬೇಕಿತ್ತು; ಪಾಕ್ ಯುವಕ ಹೀಗೆ ಹೇಳಿದ್ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
