ಬೆಂಗಳೂರು:ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ನಿರ್ಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ವಿಮರ್ಶಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲ ತಾಣದ ತಮ್ಮ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ. ಇದನ್ನು ಮುಖ್ಯಮಂತ್ರಿಗಳು ಇಂದು ಒಪ್ಪಿಕೊಂಡು ಕೃಪಾಂಕ ನೀಡುವಷ್ಟು ತಳಮಟ್ಟಕ್ಕೆ ಕುಸಿದಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಗ್ಗೆ ಅಸಹಾಯಕತೆಯಿಂದ ಕೋಪೋದ್ರಿಕ್ತರಾಗಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋದನವಾಗಿದೆ ಎಂದು ಬಿ.ವೈ.ವಿಜಯೇಂದ್ರ ಮಮ್ಮಲ ಮರುಗಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ ‘ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು’ ಅಂತದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಒದಗಿ ಬಂದಿದೆ. ‘ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತದೆ.
ವಿವೇಕ ಬಳಸದೆ ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ ಎಂದು ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈಗಲಾದರೂ ಈ ನಾಡು ಹಾಗೂ ದೇಶವನ್ನು ಭವಿಷ್ಯತ್ತಿನಲ್ಲಿ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿ ದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ ಎಂದು ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 9 =
Remember me
