ಬೆಳಗಾವಿ:ಹಿಂದು-ಮುಸ್ಲಿಂ ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ಬೆಳಗಾವಿ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳ ಕುರಿತು ಪ್ರತಿಕ್ರಿಯಿಸಿದರು. ಹಿಂದು-ಮುಸ್ಲಿಂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅಪೇಕ್ಷೆ. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು ಯಡಿಯೂರಪ್ಪ ಹೇಳಿದರು.
ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲಲ್ಲಿ ಸಣ್ಣಪುಟ್ಟ ಘಟನೆಗಳು ನಡೆಯುತ್ತಿವೆ, ಅವುಗಳಿಗೆ ನಮ್ಮ ಬೆಂಬಲ ಇಲ್ಲ. ಆ ಥರ ಘಟನೆಯಾದರೆ ಖಂಡಿಸುತ್ತೇನೆ. ಯಾರು ಅಂಥ ಸನ್ನಿವೇಶಗಳನ್ನು ಸೃಷ್ಟಿಸಿ, ಗೊಂದಲ ಉಂಟು ಮಾಡುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ ಎಂದು ಬಿಎಸ್​ವೈ ಹೇಳಿದರು.
ಪಕ್ಷ ಸಂಘಟನೆಗೆ ಆದ್ಯತೆ:ನಾಳೆಯಿಂದ ಮೂರು ದಿನಗಳ ಪ್ರವಾಸ ಶುರುವಾಗುತ್ತದೆ, ಎಲ್ಲರೂ ಒಟ್ಟಾಗಿ ನಡೆಯುತ್ತೇವೆ. ಸಿಎಂ ಮತ್ತು ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ನಾನು ರಾಜ್ಯ ಪ್ರವಾಸದ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ಚುನಾವಣೆ ಈಗಿನಿಂದಲೇ ತಯಾರಿ ನಡೆಸಿದ್ದೇವೆ. ಈ ಪ್ರವಾಸ ಪ್ರಾರಂಭ ಆಗಿದ್ದು, ಎಲ್ಲ ಕಡೆ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದರು.
ಬೇಸಿಗೆಯಲ್ಲಿ ವಾಹನದ ಪೆಟ್ರೋಲ್ ಟ್ಯಾಂಕ್ ಫುಲ್ ಮಾಡಿದ್ರೆ ಬ್ಲಾಸ್ಟ್​ ಆಗುತ್ತಾ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 4 =
Remember me
