ಬೆಂಗಳೂರು:ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಕಾರ್ಯತತ್ಪರರಾಗಿದ್ದಾರೆ.
ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
