ಬಿಡದಿ:ಹೇ.. ವಿಜಯೇಂದ್ರ ನಿನಗೆ ಧೈರ್ಯ, ತಾಕತ್ತಿದ್ದರೆ ಪಾದಯಾತ್ರೆಗೆ ಯಾವ ಕಾಂಗ್ರೆಸಿಗ ಕುಮ್ಮಕ್ಕು ಕೊಟ್ಟಿದ್ದಾನೆ ಹೇಳು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಟ್ವಿಸ್ಟ್: ಅಶ್ಲೀಲ ವಿಡಿಯೋಗಳು ಅಸಲಿ ಎಫ್‌ಎಸ್‌ಎಲ್‌ ವರದಿ ಬಹಿರಂಗ
ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಡದಿಯಲ್ಲಿ ಶುಕ್ರವಾರ ಆರಂಭವಾದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ಈ ಪಾದಯಾತ್ರೆ ಹಿಂದೆ ಕಾಂಗ್ರೆಸ್ಸಿಗರ ಕೈವಾಡವಿದೆ ಎಂದು ಹೇಳಿದ್ದಾನೆ. ಹೇ.. ವಿಜಯೇಂದ್ರ ನಿನಗೆ ತಾಕತ್ತಿದ್ದರೆ, ಧೈರ್ಯವಿದ್ದರೆ ನೀವು ಹೇಳಿದಂತೆ ಕಾಂಗ್ರೆಸ್ ಪಕ್ಷದ ಯಾವನು ಪಾದಯಾತ್ರೆಗೆ ಕುಮ್ಮಕ್ಕು ನೀಡಿದ್ದಾನೆ ಅವನ ಹೆಸರು ಹೇಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ಆಕ್ರೋಶ ವ್ಯಕ್ತಪಡಿಸಿದರು.
“ಈ ಪಾದಯಾತ್ರೆ ಮೂಲಕ ನಮಗೆ ಈ ಪವಿತ್ರವಾದ ಜನಾಂದೋಲನವನ್ನು ಹಮ್ಮಿಕೊಳ್ಳಲು ಅವಕಾಶ ಮಾಡಿಕೊಟ್ಟಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಈ ಪಾದಯಾತ್ರೆ ಹಮ್ಮಿಕೊಳ್ಳದಿದ್ದರೆ, ಜನತಾ ದಳವನ್ನು ಬಿಜೆಪಿ ಜೊತೆ ವಿಲೀನ ಮಾಡದಿದ್ದರೆ, ನಾವು ಈ ಹೋರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ” ಎಂದು ಲೇವಡಿ ಮಾಡಿದರು.
“ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಮೂಲಕ ಇಲ್ಲಿಗೆ ಬರುತ್ತಿದ್ದಾರೆ. ಇಲ್ಲಿಗೆ ಬಂದಾಗ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಬಿಜೆಪಿ ಅವಧಿಯಲ್ಲಿ ಬೋವಿ ನಿಗಮದಲ್ಲಿ 87 ಕೋಟಿ, ಕೃಷಿ ಮಾರುಕಟ್ಟೆಗಳಲ್ಲಿ 47 ಕೋಟಿ ರೂ. ಅಕ್ರಮ ನಡೆದಿದೆ. ಈ ಹಗರಣ ನಡೆದಾಗ ಯಾರು ಮುಖ್ಯಮಂತ್ರಿ, ಯಾರು ಮಂತ್ರಿ, ಯಾರು ನಿಗಮದ ಅಧ್ಯಕ್ಷರಾಗಿದ್ದರು? ಈ ಬಗ್ಗೆ ನೀವು ಉತ್ತರ ನೀಡಬೇಕು. ನೀವು ಹೇಳದಿದ್ದರೆ ನಾವು ಹೇಳುತ್ತೇವೆ. ನಾವು ಹೇಳಲು ಇನ್ನು ಒಂದು ವಾರಗಳ ಕಾಲಾವಕಾಶವಿದೆ” ಎಂದು ಹೇಳಿದರು.
“ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯರಾದ ಬಿಜೆಪಿಯ ವೀರಯ್ಯ ಅವರು 47 ಕೋಟಿ ರೂ. ನುಂಗಿದ್ದಾರೆ. ಈ ಅಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಆತ ಜೈಲು ಸೇರಿದ್ದಾನೆ. ಬಿಜೆಪಿ ಹಾಗೂ ಜೆಡಿಎಸ್ ನವರು ಈ ಅಕ್ರಮದ ಬಗ್ಗೆ ಯಾಕೆ ಹೋರಾಟ ಮಾಡುತ್ತಿಲ್ಲ? ಈ ಅಕ್ರಮದ ತನಿಖೆಯನ್ನು ಅವರೇ ಯಾಕೆ ತನಿಖೆ ಮಾಡಿಸಲಿಲ್ಲ? ಹೀಗೆ ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ದೊಡ್ಡ ಪಟ್ಟಿಯೇ ನಮ್ಮ ಬಳಿ ಇವೆ” ಎಂದು ತಿಳಿಸಿದರು.
“ನಾವು ಪಾದಯಾತ್ರೆ ಮಾಡುವುದಿಲ್ಲ. ಈ ರೀತಿ ಸಾರ್ವಜನಿಕ ಸಭೆ ಮಾಡಿ ಬಿಜೆಪಿ ನಾಯಕರನ್ನು ಪ್ರಶ್ನಿಸುತ್ತೇವೆ. ಬಿಜೆಪಿಯವರು ಬರೀ ಗದ್ದಲ ಮಾಡುತ್ತಾರೆ, ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುತ್ತಾರೆ. ಕುಮಾರಸ್ವಾಮಿ ಅವರಿಗೆ ಸದನದಲ್ಲಿ ಡಿವಿಜಿ ಅವರ ಸಾಲುಗಳನ್ನು ಹೇಳಿದ್ದೆ. ‘ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ, ಗದ್ದಲವ ತುಂಬಿ ಪ್ರಸಿದ್ದನಾಗುತಿಹೆ, ಉದ್ಧರಿಸುವೆನು ಜಗವನೆನ್ನುತಿಹ ಸಖನೆ, ನಿನ್ನ ಉದ್ಧಾರವೆಷ್ಟಾಯ್ತೊ? ಮಂಕುತಿಮ್ಮ’ ಎಂದು ಹೇಳಿದ್ದೆ” ಎಂದು ತಿಳಿಸಿದರು.
“ಕುಮಾರಣ್ಣ, ಅಶೋಕಣ್ಣಾ, ವಿಜಯೇಂದ್ರ, ಅಶ್ವತ್ಥ್ ನಾರಾಯಣ, ಸಿ.ಟಿ ರವಿ ನೀವುಗಳು ನಮ್ಮ ಈ ಪ್ರಶ್ನೆಗಳಿಗೆ ಪಾದಯಾತ್ರೆ ವೇಳೆ ಉತ್ತರ ನೀಡಬೇಕು” ಎಂದು ಆಗ್ರಹಿಸಿದರು.
Paris Olympics: ಕಂಚು ಗೆದ್ದ ಸ್ವಪ್ನಿಲ್​ 1 ಕೋಟಿ ರೂ. ಬಹುಮಾನ ಘೋಷಿಸಿದ ಸಿಎಂ ಏಕನಾಥ ಶಿಂದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
