ಬೆಂಗಳೂರು:ಇದು ರೈಲಿನಲ್ಲಿ ಪ್ರಯಾಣಿಸಲಿರುವವರ ಗಮನಕ್ಕೆ. ನೀವು ರೈಲಿನಲ್ಲಿ ಸಂಚರಿಸುವುದಿದ್ದರೆ ಈ ಒಂದು ಮುನ್ನೆಚ್ಚರಿಕೆಯನ್ನು ವಹಿಸುವುದು ಅತ್ಯಗತ್ಯ. ಇಲ್ಲದಿದ್ದರೆ ದಂಡ ತೆರಬೇಕಾದ್ದು ಅನಿವಾರ್ಯವಾಗುತ್ತದೆ ಎಂದು ರೈಲ್ವೆ ಇಲಾಖೆ ಮುನ್ಸೂಚನೆ ನೀಡಿದೆ. ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲು ಪ್ರಯಾಣದ ವೇಳೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಕರೊನಾ ಸೋಂಕು ಹರಡುವುದನ್ನು ತಡೆಯಲು ದೇಶದೆಲ್ಲೆಡೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ವೈರಸ್‌ನ ಎರಡನೇ ಅಲೆಯ ಪ್ರಭಾವ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಮಾಸ್ಕ್ ಧರಿಸದವರ ವಿರುದ್ಧ ಕ್ರಮಕ್ಕೆ ನಿರ್ಧರಿಸಲಾಗಿದೆ. ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಬರುವವರಿಗೆ ದಂಡ ವಿಧಿಸಲಾಗುತ್ತಿದೆ.
ಇದನ್ನೂ ಓದಿ:ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​
ಅದೇ ರೀತಿ ಇದೀಗ ರೈಲು ನಿಲ್ದಾಣದ ಜತೆಗೆ ರೈಲಿನಲ್ಲಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ರೈಲು ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಭಾರತೀಯ ರೈಲ್ವೆ ನಿಯಮ 2012ರ ಅಡಿಯಲ್ಲಿ 500 ರೂ. ದಂಡ ವಿಧಿಸಲಾಗುವುದು. ಅದರ ಜತೆಗೆ ಪ್ರಯಾಣಿಕರು ನಿಲ್ದಾಣ ಮತ್ತು ರೈಲಿನೊಳಗೆ ವ್ಯಕ್ತಿಗತ ಅಂತರ ಕಾಪಾಡಬೇಕು ಎಂದು ತಿಳಿಸಲಾಗಿದೆ.
ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಬೇಡ, ಇದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ; ಸಿಎಂ, ಆರೋಗ್ಯ ಸಚಿವರಿಗೆ ಶಾಸಕ ರಘುಪತಿ ಭಟ್​ ಮನವಿ

ಇನ್ನೆರಡು ತಿಂಗಳು 10ಕ್ಕಿಂತ ಹೆಚ್ಚು ಜನ ಸೇರದಂತೆ ನಿಷೇಧಿಸಿ; ಕರೊನಾ ನಿಯಂತ್ರಣಕ್ಕೆ ಇದು ಅಗತ್ಯವೆಂದ ಕಾರ್ಯಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 16 =
Remember me
