ಬೆಂಗಳೂರು:ಮತ್ತೆ ಲಾಕ್​ಡೌನ್​ ಆಗಬಾರದು ಎಂದರೆ ಕೋವಿಡ್​ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ. ಕರೊನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಈ ನಿಯಮಗಳನ್ನು ಜನರು ಹೇಗೆ ಪಾಲಿಸುತ್ತಾರೆ ಎಂದು ಕಾದು ನೋಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಖಡಕ್​ ಸೂಚನೆ ನೀಡಿದ್ದಾರೆ.ಹೆಚ್ಚುತ್ತಿರುವ ಕರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿ ಮಾ.17ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ನೀಡಲಿರುವ ಸಲಹೆ, ವಾರದ ನಂತರ ಪರಿಸ್ಥಿತಿ ಅವಲೋಕಿಸಿ ಅನಿವಾರ್ಯವೆನಿಸಿದರೆ ಬಿಗಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೆಲವು ಜಿಲ್ಲೆಗಳಲ್ಲಿ ಕರೊನಾ ಸೋಂಕು ಪ್ರಮಾಣ ಜಾಸ್ತಿ, ಮರಣ ಪ್ರಮಾಣ ಕಡಿಮೆ ಇದೆ. ಎರಡನೇ ಅಲೆ ಮುನ್ಸೂಚನೆ ಇದು ಎಂದು ತಜ್ಞರ ತಂಡ ತಿಳಿಸಿದೆ. ಪರಿಸ್ಥಿತಿ ಎದುರಿಸಲು ಕೆಲವು ಸಲಹೆಗಳನ್ನು ನೀಡಿದ್ದು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ, ಮತ್ತೆ ಲಾಕ್‌ಡೌನ್ ಆಗಬಾರದು ಎಂದರೆ ಜನತೆ ಕಟ್ಟುನಿಟ್ಟಾಗಿ ಕರೊನಾ ನಿಯಮ ಪಾಲಿಸಬೇಕು ಎಂದು ಸಿಎಂ ಮನವಿ ಮಾಡಿದರು.
ಕಳೆದ 14 ದಿನಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ, ಮರಣ ದರ ಕಡಿಮೆ ಇದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ತುಮಕೂರು, ಉಡುಪಿ‌, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ. ಇದು ಕರೊನಾ ಎರಡನೇ ಅಲೆಯ ಮುನ್ಸೂಚನೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪಾಸಿಟಿವ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದರು. ಮತದಾರರ ಪಟ್ಟಿ ಆಧರಿಸಿ ಹಿರಿಯ ನಾಗರಿಕರನ್ನು ಗುರುತಿಸಿ ಲಸಿಕೆ ಹಾಕುವುದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗೆ ಲಸಿಕೆ ಸೇರಿ ಕರೊನಾ ಹೆಚ್ಚು ಇರುವ ಜಿಲ್ಲೆಗಳಲ್ಲಿ ಕೈಗೊಳ್ಳುವ ಸಲಹೆ ನೀಡಲಾಗಿದೆ ಎಂದರು.
ಕರೊನಾ ನಿಯಮ ಉಲ್ಲಂಘನೆ : ಬಾಲಿವುಡ್ ನಟಿ ವಿರುದ್ಧ ಮುಂಬೈ ಪಾಲಿಕೆ ದೂರು

ಫೇಸ್​ಬುಕ್​, ಟ್ವಿಟರ್​, ಇನ್​ಸ್ಟಾಗ್ರಾಂ ಎಲ್ಲದ್ದಕ್ಕೂ ಗುಡ್​ಬೈ ಎಂದ ಆಮೀರ್​- ಕಾರಣ ಇಲ್ಲಿದೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 5 =
Remember me
