ಮೈಸೂರು:ನಿಮ್ಮಲ್ಲಿ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ. ಆಗ ರಾಜ್ಯದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ, ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಕುಮಾರಸ್ವಾಮಿ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ, ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನನ್ನ ಬದುಕಿನ ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿದ್ದು, ನಿಮ್ಮನ್ನು ಮನೆಗೆ ಕಳಿಸುವೆ ಎಂದು ವಾಗ್ದಾಳಿ ನಡೆಸಿದರು.
ಈ ಸರ್ಕಾರ ದಿವಾಳಿ ಆಗಿದೆ. ದಿವಾಳಿ ಸ್ಥಿತಿಯಲ್ಲಿರುವ ನೀವು ವಿಜಯೇಂದ್ರ, ಅಶೋಕ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಶಿವಕುಮಾರ್ ಅವರ ಪಾಪದ ಕೊಡ ತುಂಬುತ್ತಿದೆ. ನೀವು ನಿಮ್ಮ ಭವಿಷ್ಯದ ಬಗ್ಗೆ ಯೋಚಿಸಿ. ಶಿವಕುಮಾರ್ ತಾನು ಕಲ್ಲುಬಂಡೆ ಎನ್ನುತ್ತಾರೆ. ಯಾವಾಗ ಏನು ಆಗುತ್ತದೋ ಗೊತ್ತಿಲ್ಲ. ಮೊದಲು ನಿಮ್ಮ ಭವಿಷ್ಯದ ಕಡೆಗೆ ಗಮನ ಕೊಡಿ ಎಂದು ಎಚ್ಚರಿಕೆ ನೀಡಿದರು.
ಹಿಂದಿನ ಯಾವ ಮುಖ್ಯಮಂತ್ರಿ ಕೂಡ ತನ್ನ ಕುಟುಂಬಕ್ಕೆ ನಿವೇಶನ ಕೊಟ್ಟಿಲ್ಲ. ಇದು ಯಾರ ಅಪ್ಪನ ಮನೆ ದುಡ್ಡು? ಇಷ್ಟಾದರೂ ಪ್ರಾಮಾಣಿಕ ಎನ್ನುತ್ತೀರಿ. ಇಂತಹ ಸಿಎಂ, ಡಿಸಿಎಂ ರಾಜ್ಯದಲ್ಲಿ ಇರುವವರೆಗೆ ಅಭಿವೃದ್ಧಿ ಸಾಧ್ಯವಿಲ್ಲ. ರಾಜ್ಯದ ಜನ ಬೇಗ ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ. ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ. ಈಗಲೂ ಚುನಾವಣೆ ನಡೆದರೆ ಬಿಜೆಪಿ 130- 140 ಸ್ಥಾನ ಗೆಲ್ಲಲಿದೆ ಎಂದು ಸವಾಲು ಹಾಕಿದರು.
ಈ ಪಾದಯಾತ್ರೆ ನಿಮ್ಮನ್ನು ಮನೆಗೆ ಕಳುಹಿಸುವರೆಗೂ ನಿಲ್ಲದು. 82 ವರ್ಷ ಆಗಿದ್ದರೂ ರಾಜ್ಯದ ಉದ್ದಗಲ ಓಡಾಡುತ್ತೇನೆ ಎಂದರು. ಮೋದಿ, ದೇವೇಗೌಡರ ಬಗ್ಗೆಯೂ ಹಗುರವಾಗಿ ಮಾತನಾಡುತ್ತೀರಿ. ಇದು ನಿಮಗೆ ಶೋಭೆ ತರುವುದಿಲ್ಲ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ- ಜೆಡಿಎಸ್‌ ಸರ್ಕಾರ ತರಲು ಜನ ಕಾರಣಕರ್ತರಾಗಬೇಕಿದೆ ಎಂದು ಕರೆ ಕೊಟ್ಟರು.
ಕೇಂದ್ರ ಸಂಪುಟ ಕಾರ್ಯದರ್ಶಿ ಐಎಎಸ್​ ಅಧಿಕಾರಿ ಟಿವಿ ಸೋಮನಾಥನ್ ನೇಮಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eight =
Remember me
