ಬೆಂಗಳೂರು:ಶೀತಜ್ವರ (ಐಎಲ್​ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ. ಈ ಸಂಬಂಧ ಆರೋಗ್ಯ ಇಲಾಖೆ ನಿರ್ದೇಶಕ ಡಾ. ಓಂಪ್ರಕಾಶ ಪಾಟೀಲ್ ಆದೇಶ ಹೊರಡಿಸಿದ್ದು, ಐಎಲ್​ಐ ಹಾಗೂ ಸಾರಿ ಸಮಸ್ಯೆ ಇರುವವರಿಗೆ ಕರೊನಾ ಸೋಂಕು ಅಪಾಯವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ.
ಈ ರೀತಿ ಸಮಸ್ಯೆಗಳಿಂದಾಗಿ ಚಿಕಿತ್ಸೆಗೆ ಬರುವವರಿಗೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಪರೀಕ್ಷೆ ನಡೆಸದಿರುವುದು ಹಾಗೂ ಸರ್ಕಾರದ ಪೋರ್ಟಲ್​ನಲ್ಲಿ ಮಾಹಿತಿ ದಾಖಲಿಸದಿರುವುದು ಗಮನಕ್ಕೆ ಬಂದಿದೆ. ಇದರಿಂದ ಪ್ರಕರಣಗಳು ತಡವಾಗಿ ವರದಿಯಾಗಿ, ರೋಗಿಗಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರುವುದು ಹೆಚ್ಚಾಗಿದೆ. ಜತೆಗೆ ಹೆಚ್ಚಿನ ಸಾವು ಸಂಭವಿಸುತ್ತಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕರೊನಾ ಭೀತಿಯಿಂದ ಬಾವಿಗೆ ಹಾರಿದ ಫೋಟೊಗ್ರಾಫರ್: ಶವ ಎತ್ತಲು ಹಿಂಜರಿದ ಅಗ್ನಿಶಾಮಕ ಸಿಬ್ಬಂದಿ!
ಆಸ್ಪತ್ರೆಯೊಳಗೆ ಪರೀಕ್ಷೆಯ ವ್ಯವಸ್ಥೆ ಇದ್ದಲ್ಲಿ ಸರ್ಕಾರ ನಿಗದಿಪಡಿಸಿದ ದರದಲ್ಲಿ ಪರಿಕ್ಷೆ ನಡೆಸಬೇಕು. ಇಲ್ಲವಾದಲ್ಲಿ ರೋಗಿಯ ಗಂಟಲ ದ್ರವದ ಮಾದರಿ ಪಡೆದು ಪ್ರಯೋಗಾಲಯಗಳಿಗೆ ರವಾನಿಸಬೇಕು. ಮಾದರಿ ಸಂಗ್ರಹಕ್ಕೆ 200 ರೂ. ನಿಗದಿಪಡಿಸಬಹುದು. ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಗಳು ಅನ್ವಯವಾಗಲಿದೆ. ಪ್ರತಿ ಜಿಲ್ಲೆಯಲ್ಲೂ ಕಾರ್ಯನಿರ್ವಹಿಸುತ್ತಿರುವ ಸಂಚಾರಿ ಸ್ವಾಬ್ ಸಂಗ್ರಹ ತಂಡಗಳಿಗೆ ಸ್ವಾಬ್ ಸಂಗ್ರಹಿಸಲು ಮನವಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಕಚೇರಿಗೆ ಬೀಗಮುದ್ರೆ : ನಿಯಮ ಉಲ್ಲಂಸಿ ಬಿಲ್ ಪಾವತಿ
ನಿಯಮ ಪಾಲಿಸದಿದ್ದರೆ ದಂಡ:ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಹಾಗೂ ಪ್ರಯೋಗಾಲಯಗಳಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ 2020ರ ನಿಯಮದಡಿ ಪರೀಕ್ಷೆ, ತಪಾಸಣೆ, ಚಿಕಿತ್ಸೆ, ರೆಫರಲ್, ಐಸಿಯು ಪ್ರಕರಣಗಳು ಸೇರಿ ಕರೊನಾ ಸೋಂಕಿತರ ಸಮಗ್ರ ಮಾಹಿತಿಯನ್ನು ಕಾಲಕಾಲಕ್ಕೆ ಒದಗಿಸಲು ಸೂಚನೆ ನೀಡಲಾಗಿದೆ. ಇದನ್ನು ಪಾಲಿಸುವಲ್ಲಿ ವಿಫಲವಾದ ಸಂಸ್ಥೆಗಳ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನನ್ನ ಪತ್ನಿಯನ್ನು ಮಂತ್ರವಾದಿಯೊಬ್ಬ ಕಿಡ್ನ್ಯಾಪ್ ಮಾಡಿದ್ದಾನೆ: ಕೆ. ಕಲ್ಯಾಣ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 19 =
Remember me
