ಕುಂದಾಪುರ:ಎರಡು ಲಾರಿಗಳಲ್ಲಿ 52 ಕೋಣ, ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರು ಮಂಗಳವಾರ ಬೆಳಗ್ಗೆ ಅಮಾಸೆಬೈಲು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪೊಲೀಸರು ಹೊಸಂಗಡಿ ಚೆಕ್​ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಲಾರಿಗಳು ಆ ದಾರಿಯಾಗಿ ಬಂದಿದ್ದವು. ಇಷ್ಟೊಂದು ಕೋಣ,ಎಮ್ಮೆಗಳನ್ನು ಸಾಗಿಸುತ್ತಿರುವ ಬಗ್ಗೆ ಅನುಮಾನ ಮೂಡಿದ್ದು, ದಾಖಲೆಗಳನ್ನು ಕೇಳಿದಾಗ ಆರೋಪಿಗಳು ಸಮರ್ಪಕ ಉತ್ತರ ನೀಡಲಿಲ್ಲ. ಹೀಗಾಗಿ ಅವರನ್ನು ಬಂಧಿಸಿ, ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.
ಇದನ್ನೂ ಓದಿ:ಹಸಿರು ಬಣ್ಣಕ್ಕೆ ತಿರುಗಿದ ಕಡಲು, ಸುರತ್ಕಲ್ ಸಮುದ್ರ ತೀರದಲ್ಲಿ ಗೋಚರ
ವಿಚಾರಣೆ ವೇಳೆ ಆರೋಪಿಗಳು ಈ ಜಾನುವಾರುಗಳನ್ನು ಮಾಂಸಕ್ಕಾಗಿ ಕೊಂಡೊಯ್ಯುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಒಂದು ಲಾರಿಯಲ್ಲಿ 24 ಕೋಣಗಳಿದ್ದರೆ, ಇನ್ನೊಂದು ಲಾರಿಯಲ್ಲಿ 28 ಎಮ್ಮೆಗಳಿದ್ದವು. ಬಂಧಿತರನ್ನು ಹರಿಹರ ಗಂಗನರಸಿ ಗುತ್ತೂರು ಮೆಹಬೂಬ್, ಬೈಲುಹೊಂಗಲ ಕಲ್ಲುಕುಟ್ರಿ ಬೆಳವಡಿ ಬಾಪು ಸಾಹೇಬ್, ದಾವಣಗೆರೆ ಚಿಕ್ಕನಹಳ್ಳಿ ಹೊಸಾ ಬಡಾವಣೆ ಇಮ್ರಾನ್, ಬೆಳಗಾವಿ ಬೈಲುಹೊಂಗಲ ಆಸಿಫ್ ಎಂದು ಗುರುತಿಸಲಾಗಿದೆ. ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PHOTOS|ದೊಡ್ಡಪ್ಯಾಯಲಗುರ್ಕಿ ಬಳಿ ತಡರಾತ್ರಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − four =
Remember me
