ಬೆಂಗಳೂರು:ಅಕ್ರಮವಾಗಿ 46 ಬಿಪಿಎಲ್​ ಕಾರ್ಡ್​ ಮಂಜೂರು, ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಸಾವಿರ ರೂ. ನಿಂದ 5 ಸಾವಿರ ರೂ.ವರೆಗೆ ವಸೂಲಿ, ಪ್ರತಿ ಕಾರ್ಡ್​ಗೆ ಅಕ್ರಮವಾಗಿ 5 ರೂ.ಸಂಗ್ರಹಣೆ ಮಾಡುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಹಾರ ಶಿರಸ್ತುದಾರ ಅಧಿಕಾರಿ ತಿಮ್ಮಯ್ಯ ಅವರನ್ನು ಅಮಾನತುಗೊಳಿಸಿ ಆಹಾರ ಇಲಾಖೆ ಆದೇಶಿಸಿದೆ.
ಇಲಾಖೆಯಲ್ಲಿ ಆಹಾರ ಶಿರಸ್ತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ತಿಮ್ಮಯ್ಯ, ಲಂಚ ಪಡೆದು ವಿಶೇಷ “ವೈದ್ಯಕಿಯ ಕೇಸ್​’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಬಿಪಿಎಲ್​ ಚೀಟಿ ಕೊಟ್ಟಿರುವುದು ವರದಿಯಲ್ಲಿ ಬಹಿರಂಗವಾಗಿತ್ತು. ಅಂಗಡಿ ಮಾಲೀಕರಿಂದ ಬಲವಂತಾಗಿ ಹಣ ವಸೂಲಿ ಮಾಡುತ್ತಿದ್ದರು. ಈ ಬಗ್ಗೆ ಇಲಾಖೆ ಆಯುಕ್ತರ ಕಚೇರಿಗೆ ಮಾಲೀಕರು ದೂರು ನೀಡಿದ್ದರು.
ಈದ್ಗಾ ಮೈದಾನದಲ್ಲಿ ಪಾಲಿಕೆಯಿಂದಲೇ ಗಣೇಶ ಪ್ರತಿಷ್ಠಾಪಿಸಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ನೌಕರ ವಿರುದ್ಧ ಸಾಕಷ್ಟು ದೂರು ದಾಖಲಾಗಿತ್ತು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಕಾರ್ಡ್​ಗೆ 5 ರೂ.ನಂತೆ ಹಣ ವಸೂಲಿ ಮಾಡುತ್ತಿದ್ದೇವೆ ಎಂದು ರಾಜಾರೋಷವಾಗಿ ಹೇಳಿದ್ದರು. ಈ ಕುರಿತು ಹಲವು ಬಾರಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದರೂ ತಿಮ್ಮಯ್ಯ ಪದೇಪದೆ ಕರ್ತವ್ಯದಲ್ಲಿ ಪದೇಪದೆ ಲೋಪವೆಸಗುತ್ತಿದ್ದರು. ಹಾಗಾಗಿ, ಕರ್ನಾಟಕ ರಾಜ್ಯ ನಾಗರಿಕ ಸೇವಾ ( ನಡತೆ) ನಿಯಮ ಅನ್ವಯ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಸಸ್ಪೆಂಡ್​ ಮಾಡಲಾಗಿದೆ ಎಂದು ಇಲಾಖೆ ಆಯುಕ್ತೆ ವಾಸಿರೆಡ್ಡಿ ವಿಜಯ ಜ್ಯೋತ್ಸ್ನ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − eleven =
Remember me
