ಬೆಂಗಳೂರು:ಕಾನೂನು ಬಾಹಿರವಾಗಿ ಇಬ್ಬರು ಅಪ್ರಾಪ್ತರನ್ನು ಮಕ್ಕಳ ಕಲ್ಯಾಣ ಸಮಿತಿ ಮತ್ತು ಪೊಲೀಸರ ಮಧ್ಯಸ್ಥಿಕೆಯಲ್ಲಿ ತಾಯಿಯಿಂದ ತಂದೆಗೆ ಹಸ್ತಾಂತರ ಮಾಡಿದ್ದ ಕ್ರಮಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದ್ದು, ಇಬ್ಬರೂ ಅಪ್ರಾಪ್ತರನ್ನು ತಾಯಿಯ ಮಡಿಲು ಸೇರುವಂತೆ ಮಾಡಿದೆ.
ತಮ್ಮ ಮಕ್ಕಳನ್ನು ಕಾನೂನುಬಾಹಿರವಾಗಿ ಪತಿಗೆ ಹಸ್ತಾಂತರಿಸಿದ್ದನ್ನು ಪ್ರಶ್ನಿಸಿ ನಗರದ ನಾಯಂಡಹಳ್ಳಿ ನಿವಾಸಿಯಾಗಿರುವ ರೆಹಾನಾ ಬೇಗಂ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ಕೆ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು, ಅರ್ಜಿದಾರರ ಪತಿಯ ಮನವಿಯಂತೆ ಮಕ್ಕಳನ್ನು ಹಸ್ತಾಂತರಕ್ಕೆ ಮಾಡಿದ್ದಾರೆ. ಕಲ್ಯಾಣ ಸಮಿತಿ ಅಧ್ಯಕ್ಷರಿಗೆ ಕಾನೂನಿನ ಕೊರತೆಯಿಂದ ಈ ಆದೇಶ ನೀಡಿದ್ದಾರೆ ಎಂಬುದಾಗಿ ನ್ಯಾಯಪೀಠಕ್ಕೆ ವಿವರಿಸಿದರು.
ಕೆಲ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಮಕ್ಕಳ ಕಲ್ಯಾಣ ಸಮಿತಿಯಿಂದ ಲಿಖಿತ ಬೇಷರತ್ ಕ್ಷಮಾಪಣೆ ದಾಖಲಿಸಿಕೊಂಡು ಮುಂದಿನ ದಿನಗಳಲ್ಲಿ ಈ ರೀತಿಯ ನಿರ್ಧಾರಗಳನ್ನು ಕೈಗೊಳ್ಳದಂತೆ ಎಚ್ಚರಿಕೆ ನೀಡಿ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿದೆ.
ಏನಿದು ಪ್ರಕರಣ ?:ಬೆಂಗಳೂರಿನ ನಾಯಂಡಹಳ್ಳಿ ನಿವಾಸಿಯಾಗಿರುವ ರೆಹಾನಾ ಬೇಗಂ ಎಂಬುವವರ ಹಾಗೂ ಅವರ ಪತಿಯ ನಡುವೆ ವೈವಾಹಿಕ ಜೀವನದಲ್ಲಿ ಮನಸ್ತಾಪ ಇತ್ತು. ಈ ನಡುವೆ ಅರ್ಜಿದಾರರ ಇಬ್ಬರು ಅಪ್ರಾಪ್ತ ಮಕ್ಕಳನ್ನು ನಗರದ ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಮತ್ತು ಚಂದ್ರ ಬಡಾವಣೆ ಪೊಲೀಸ್‌ರ ಸಮ್ಮುಖದಲ್ಲಿ ಪತಿಗೆ ಹಸ್ತಾಂತರ ಮಾಡಬೇಕು ಎಂದು ನಿರ್ದೇಶಿಸಲಾಗಿತ್ತು.
ಅದರಂತೆ ಅರ್ಜಿದಾರರು ಮಕ್ಕಳನ್ನು ಪತಿಗೆ ನೀಡಿದ್ದರು. ನಂತರ ಅರ್ಜಿದಾರರು, ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ಅಧಿಕಾರ ಮೀರಿ ಮಕ್ಕಳನ್ನು ಪತಿಗೆ ನೀಡುವಂತೆ ಸೂಚನೆ ನೀಡಿದೆ. ಆದ್ದರಿಂದ ತಮ್ಮ ಇಬ್ಬರೂ ಮಕ್ಕಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಹೈಕೋರ್ಟ್‌ಗೆ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.
ಬೇಷರತ್ ಕ್ಷಮೆಯಾಚನೆ:ರೆಹಾನಾ ಬೇಗಂ ಅವರ ಪತಿ ತನ್ನ ಇಬ್ಬರು ಮಕ್ಕಳನ್ನು ಬೇಸಿಗೆ ರಜೆ ಹಿನ್ನೆಲೆಯಲ್ಲಿ ಎರಡು ವಾರ ತನ್ನೊಂದಿಗೆ ಕಳುಹಿಸಲು ಕೋರಿ ಮನವಿ ಮಾಡಿದ್ದರು. ಅವರ ಮನವಿಯ ಮೇರೆಗೆ ರೆಹಾನ್ ಬೇಗಂ ಅವರು ಸಿದ್ದರಿದ್ದ ಕಾರಣ ಮಕ್ಕಳನ್ನು ಪತಿಯೊಂದಿಗೆ ಕಳುಹಿಸಲು ಸೂಚಿಸಿದ್ದೆ. ಈ ಸಂಬಂಧ ಆದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸದೇ ಸಹಿ ಮಾಡಿದ್ದೇನೆ.
ಅಲ್ಲದೆ, ಅಪ್ರಾಪ್ತ ಮಕ್ಕಳನ್ನು ತಂದೆಯೊಂದಿಗೆ ಕಳುಹಿಸುವುದಕ್ಕೆ ಅಧಿಕಾರವಿಲ್ಲ. ಕೇವಲ ಏಳು ದಿನಗಳ ಕಾಲ ಮೇಲ್ವಿಚಾರಣೆಯಿಂದ ತಂದೆಯೊಂದಿಗೆ ಮಕ್ಕಳನ್ನು ಕಳುಹಿಸಿದ್ದೇನೆ. ಇದರಲ್ಲಿ ಮಕ್ಕಳ ಹಿತದೃಷ್ಠಿಯೇ ವಿನಃ, ಯಾವುದೇ ದುರುದ್ದೇಶವಿಲ್ಲ. ಆದರೂ ನಾನು ಮಾಡಿದ ತಪ್ಪಿಗೆ ನ್ಯಾಯಾಲಯಕ್ಕೆ ಬೇಷರತ್ತಾಗಿ ಕ್ಷಮಾಪಣೆ ಕೇಳುತ್ತೇನೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ನಾಗರತ್ನ, ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.
ಅಧಿಕಾರವಧಿ ಕೊನೆಗೊಳಿಸಬಹುದು . . .ಪ್ರಕರಣ ಸಂಬಂಧ ಮಕ್ಕಳ ಕಲ್ಯಾಣ ಸಮಿತಿಯ ಆದೇಶ ಸಂಪೂರ್ಣವಾಗಿ ಅಧಿಕಾರದ ದುರುಪಯೋಗವೆಂದು ಸ್ಪಷ್ಟವಾಗಿ ತಿಳಿದುಬರುತ್ತದೆ. ಈ ಬಗ್ಗೆ ಬಾಲ ನ್ಯಾಯ ಕಾಯ್ದೆಯಲ್ಲಿ ತಿಳಿಸಿರುವಂತೆ ಅಧ್ಯಕ್ಷರು, ಸದಸ್ಯರ ಅಧಿಕಾರವಧಿ ಕೊನೆಗೊಳಿಸಬಹುದು. ಕ್ಷಮೆ ಇಲ್ಲದಂತೆ ಶಿಕ್ಷೆ ನೀಡಬಹುದಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
