ಕಲಬುರಗಿ:ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಆರೋಪಿಯೊಬ್ಬನಿಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರಾಗಿದೆ.
ಇಡೀ ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಪಿಎಸ್​ಐ ಎಕ್ಸಾಂ ಹಗರಣ ಪ್ರಕರಣವು ಕರ್ನಾಟಕ ಪೊಲೀಸ್​ ಇಲಾಖೆ ಮತ್ತು ರಾಜ್ಯ ಸರ್ಕಾರದ ಮಾನ ತೆಗೆದಿದೆ. ಹಗರಣದಲ್ಲಿ 50 ಕೋಟಿಗೂ ಅಧಿಕ ಹಣಕಾಸಿನ ವ್ಯವಹಾರ ನಡೆದಿದ್ದು, ಈಗಾಗಲೇ ಈ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಪೊಲೀಸರು, ಏಜೆಂಟರು, ಕೆಲ ಎಫ್​ಡಿಎ, ಎಸ್​ಡಿಎ ಸೇರಿ ಹಲವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಬಹುತೇಕರು ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಇದೀಗ ಒಬ್ಬ ಆರೋಪಿಗೆ ಜಾಮೀನು ಮಂಜೂರಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ದಾಖಲಾದ ಕೇಸ್​ನ ಆರೋಪಿ ಸುರೇಶ್ ಕಾಟೆಗಾಂವ್​ಗೆ ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ಉಮಾ ಅವರು ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಅಕ್ರಮದಲ್ಲಿ ಪ್ರಮುಖ ಆರೋಪಿಯಾಗಿರುವ ದಿವ್ಯಾ ಹಾಗರಗಿಯ ಗಂಡ ರಾಜೇಶ್ ಹಾಗರಗಿಗೆ ಜಾಮೀನು ನಿರಾಕರಿಸಿದ್ದಾರೆ. ಪಿಎಸ್​ಐ ನೇಮಕಾತಿ ಅಕ್ರಮ ಬಯಲಾಗುತ್ತಿದ್ದಂತೆಯೇ ಕಲಬುರಗಿಯಿಂದ ನಾಪತ್ತೆಯಾಗಿ ಗುಜರಾತ್​ನಲ್ಲೂ ಕೆಲ ಕಾಲ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿಗೆ ಪುಣೆಯಲ್ಲಿ ಪರಿಚಿತ ಸುರೇಶ್​ ಕಾಟೇಗಾಂವ್​ ಆಶ್ರಯ ನೀಡಿದ್ದ. ಏ.13ರಂದು ನಾಪತ್ತೆಯಾಗಿದ್ದ ದಿವ್ಯಾಳಿಗಾಗಿ ಸಿಐಡಿ ಪೊಲೀಸರು ತೀವ್ರ ಹುಡುಕಾಡ ನಡೆಸಿದ್ದರು. ಏಪ್ರಿಲ್​ ಕೊನೇ ವಾರದದಲ್ಲಿ ಪುಣೆಯಲ್ಲಿ ಸಿಕ್ಕಿಬಿದ್ದಿದ್ದಳು. ಈಕೆಗೆ ಆಶ್ರಯಕೊಟ್ಟ ಆರೋಪದಲ್ಲಿ ಸುರೇಶ್ ಕಾಟೆಗಾಂವ್​ನನ್ನೂ ಬಂಧಿಸಲಾಗಿತ್ತು.
ಸುರೇಶ್​ ಕಾಟೇಗಾಂವ್​ ಮಹಾರಾಷ್ಟ್ರದ ಸ್ಥಳೀಯ ಕಾಂಗ್ರೆಸ್​ ಮುಖಂಡ ಜತೆಗೆ ಉಧ್ಯಮಿ ಕೂಡ. ಈತನ ಸಹೋದರಿ ಸುರೇಖಾ ಕಾಂಗ್ರೆಸ್​ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಸುರೇಖಾ ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕು ಪಂಚಾಯಿತಿ​ ಮಾಜಿ ಅಧ್ಯಕ್ಷೆ ಹಾಗೂ ಸದ್ಯ ಸದಸ್ಯೆಯಾಗಿದ್ದಾರೆ. ದಿವ್ಯಾ ಸದ್ಯ ಜೈಲಿನಲ್ಲಿದ್ದಾಳೆ.
ದಿವ್ಯಾ ಹಾಗರಗಿಗೆ ಸಿಕ್ಕಿತ್ತು ಕಾಂಗ್ರೆಸ್​ ಶ್ರೀರಕ್ಷೆ! ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದು ಯಾರೆಂದು ಉಲ್ಲೇಖಸಿದ ಸಿಐಡಿ

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್​ಗಳ ಶುಲ್ಕ ಹೆಚ್ಚಳ

ಹೆಂಡ್ತಿ ಬಂದ್ಲು, ಗಂಡ ಹೋದ! ಕಾಡಿಬೇಡಿ ಪತ್ನಿಯನ್ನು ತವರಿಂದ ಕರೆತಂದವ ಮರುದಿನ ಹೀಗಾ ಮಾಡ್ಹೋದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − four =
Remember me
