ಬೆಂಗಳೂರು:ಅನಾರೋಗ್ಯದ ಹಿನ್ನೆಲೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಶಾಸಕ ರೋಷನ್ ಬೇಗ್​ರನ್ನು ಮತ್ತೆ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ.
ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ರೋಷನ್​ ಬೇಗ್​ರನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಬೇಗ್​, ಮಧುಮೇಹ, ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಸೋಮವಾರ ರೋಷನ್​ ಬೇಗ್​ ಅವರನ್ನು ಜಯದೇವ ಆಸ್ಪತ್ರೆಯಿಂದ ಜೈಲಿಗೆ ಸ್ಥಳಾಂತರಿಸಲಾಗಿದೆ. ಸದ್ಯ ಜೈಲಿನಲ್ಲೇ ಪ್ರತ್ಯೇಕ ಕೋಣೆಯಲ್ಲೇ ಬೇಗ್​ಗೆ ವೈದ್ಯರು ಚಿಕಿತ್ಸೆ ಮುಂದುವರಿಸಲಿದ್ದಾರೆ.
ಮುಂದಿನ ಕೋರ್ಟ್ ಆದೇಶ ಅಥವಾ ಬೇಲ್ ಸಿಗುವವರೆಗೂ ಬೇಗ್ ಜೈಲಿನಲ್ಲೇ ಇರಬೇಕಿದೆ. ಹೆಚ್ಚಿನ ತನಿಖೆಗಾಗಿ ಬೇಗ್​ರನ್ನು ಸಿಬಿಐ ಕಸ್ಟಡಿಗೆ ಕೇಳಿತ್ತು. ಆದರೆ ಆ ಸಮಯವನ್ನು ಅನಾರೋಗ್ಯದಿಂದ ಆಸ್ಪತ್ರೆಯಲ್ಲೇ ಬೇಗ್​ ಕಳೆದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋರ್ಟ್‌ ಆದೇಶದ ನಂತರ ಸಿಬಿಐ ಕಸ್ಟಡಿಗೆ ನೀಡುವ‌ ಸಾಧ್ಯತೆ ಇದೆ.
ತಾಯಿಯನ್ನು ಬಲಿ ಪಡೆದಿದ್ದ ಉಮಾಶ್ರೀ ಕಾರಿಗೆ ಮಗಳ ಜೀವವೂ ಹೋಯ್ತು!

ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + nineteen =
Remember me
