ಬೆಂಗಳೂರು:ಐ ಮಾನಿಟರಿ ಅಡ್ವಸರಿ (ಐಎಂಎ) ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೊಹಮದ್​ ಮನ್ಸೂರ್​ ಖಾನ್​ಗೆ ಸದ್ಯ ಜೈಲೇ ಗತಿ!
ಒಂದು ವರ್ಷದಿಂದ ಜೈಲಿನಲ್ಲಿರುವ ಮನ್ಸೂರ್​ ಖಾನ್​ ಜಾಮೀನಿಗಾಗಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಅನಾರೋಗ್ಯದ ನೆಪವೊಡ್ಡಿ ಜಾಮೀನು ನೀಡುವಂತೆ ಅರ್ಜಿಯಲ್ಲಿ ಕೋರಿಕೊಂಡಿದ್ದ. ಕೆಲ ದಿನಗಳಿಂದ ಅರ್ಜಿ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯವು ಮಂಗಳವಾರ (ಆ.18)ಕ್ಕೆ ತೀರ್ಪು ಕಾಯ್ದಿರಿಸಿತ್ತು. ಮನ್ಸೂರ್​ ಖಾನ್​ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮಂಗಳವಾರ ವಿಚಾರಣೆ ನಡೆಸಿತು.
ಇದನ್ನೂ ಓದಿರಿಆರೋಪಿ ನವೀನ್​ನನ್ನು ಗಲಭೆಕೋರರಿಂದ ಬಚಾವ್​ ಮಾಡಿದ್ದೇ ಅಖಂಡ ಶ್ರೀನಿವಾಸ ಮೂರ್ತಿ!
ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಸಾವಿರಾರು ಜನರಿಂದ ಹಣ ಪಡೆದಿದ್ದ ಐಎಂಎ ಕಂಪನಿಯು ಗ್ರಾಹಕರಿಗೆ ಹಣ ಮರಳಿಸಿದೆ ಕೋಟ್ಯಂತರ ರೂ. ವಂಚನೆ ಎಸಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿ ಮನ್ಸೂರ್​ಗೆ ಜಾಮೀನು ನೀಡಬಾರದು ಎಂದು ಸಿಬಿಐ ಪರ ಸರ್ಕಾರಿ ಹಿರಿಯ ಅಭಿಯೋಜಕ ಸುದರ್ಶನ್​ ವಾದ ಮಂಡಿಸಿದ್ದರು. ನ್ಯಾಯಾಲಯವು ಜಾಮೀನು ಅಜಿರ್ಯನ್ನು ವಜಾಗೊಳಿಸಿದ್ದು, ಮನ್ಸೂರ್​ ಖಾನ್​ಗೆ ಇನ್ನು ಜೈಲೇ ಗತಿಯಾಗಿದೆ.
ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇನ್ನಷ್ಟು ಸಾಕ್ಷಿಗಾಗಿ ಶೋಧ ನಡೆಸುತ್ತಿದ್ದಾರೆ. ದೆಹಲಿ ಇಡಿ ಅಧಿಕಾರಿಗಳು ಮನ್ಸೂರ್​ ಹೊಂದಿರುವ ಇನ್ನಷ್ಟು ಆಸ್ತಿಯನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
ಕೆಜಿಎಫ್​-2 ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ರದ್ದುಪಡಿಸುವ ಬಗ್ಗೆ ಹೈಕೋರ್ಟ್​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
