ಬೆಂಗಳೂರು:ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಂಎ ಬಹುಕೋಟಿ ವಂಚನೆ ಕೇಸ್​ ಸಂಬಂಧ 28 ಆರೋಪಿಗಳ ವಿರುದ್ಧ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಅ.17ರಂದು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಆರೋಪಿತ ಸರ್ಕಾರಿ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ವಂಚನೆ ಬಗ್ಗೆ ಸರಿಯಾಗಿ ತನಿಖೆ ಮಾಡದೆ ಆರೋಪಿತರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ವಿವರಿಸಲಾಗಿದೆ.
ನಿಂಬಾಳ್ಕರ್​ ರಕ್ಷಣೆಗೆ ನಿಂತ ಸರ್ಕಾರ?:ಐಎಂಎ ವಂಚನೆ ಪ್ರಕರಣ ಸಂಬಂಧ ಸಿಬಿಐ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವ ಐಪಿಎಸ್​ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸದೆ ಕೇವಲ ಕೆಳಹಂತದ ಪೊಲೀಸರನ್ನು ತಲೆದಂಡ ಪಡೆದ ಸರ್ಕಾರದ ಕ್ರಮಕ್ಕೆ ಪೊಲೀಸ್​ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ವಂಚಕ ಕಂಪನಿ ಪರ ಸರ್ಕಾರಕ್ಕೆ ವರದಿ ಸಲ್ಲಿಸಿದ ಆರೋಪದ ಮೇಲೆ ಐಜಿಪಿ ಹೇಮಂತ್​ ನಿಂಬಾಳ್ಕರ್​ ಹಾಗೂ ಕೆಎಸ್​ಆರ್​ಪಿ ಕಮಾಡೆಂಟ್​ ಅಜಯ್​ ಹಿಲೋರಿ ಸೇರಿದಂತೆ ಐವರು ಪೊಲೀಸರ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದೀಗ ಡಿವೈಎಸ್ಪಿ, ಇನ್​ಸ್ಪೆಕ್ಟರ್​ ಹಾಗೂ ಪಿಎಸ್​ಐನ್ನು ಅಮಾನತುಗೊಳಿಸಿದ ಸರ್ಕಾರ, ಐಪಿಎಸ್​ ಅಧಿಕಾರಿಗಳ ಕುರಿತು ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಫೋಟೋ ಫ್ರೇಮ್​, ಬಳೆಗಳಲ್ಲಿ ಇತ್ತು ಬರೋಬ್ಬರಿ 13 ಕೋಟಿ ಮೌಲ್ಯದ ಡ್ರಗ್ಸ್​!

2 ಕಿ.ಮೀ. ಓಡಾಡಿ ಸಿಕ್ಕಸಿಕ್ಕವರಿಗೆ ಇರಿದ, ರಾತ್ರಿಯಿಡೀ ಪೊಲೀಸರಿಗೂ ಟಾರ್ಚರ್​ ಕೊಟ್ಟ! ಈತನ ಹಿಸ್ಟರಿ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − two =
Remember me
