ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು, ತೆರಿಗೆ ಕಟ್ಟುವ ವಿಚಾರದಲ್ಲಿ ಬಿಬಿಎಂಪಿಗೆ ಮೋಸವೆಸಗುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹಸ್ ದಾಸರಿ ಆರೋಪಿಸಿದ್ದಾರೆ.
ಸರಿಯಾಗಿ ಬಾಡಿಗೆ ಕಟ್ಟುತ್ತಿಲ್ಲ ಎಂದು ಕಾರಣ ನೀಡಿ ಬಿಬಿಎಂಪಿ ಕಟ್ಟಡದಲ್ಲಿದ್ದ ಎರಡು ಅಂಚೆ ಕಚೇರಿಗಳನ್ನು ಬಿಬಿಎಂಪಿ ಬಾಗಿಲು ಹಾಕಿಸಿತ್ತು. ಆದರೆ, ಇಲ್ಲಿ ನೋಡಿದರೆ 900 ರಿಂದ 1000 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇದೆ. ತೆರಿಗೆ ಬಾಕಿ ಉಳಿಸಿಕೊಂಡವರು ಪ್ರತಿಷ್ಠಿತರಾಗಿದ್ದು ಬಿಬಿಎಂಪಿಗೆ ಅವರಿಗೆ ನೋಟಿಸ್ ಕೊಡುವ ಧೈರ್ಯ ಕೂಡ ಇಲ್ಲದಂತಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.
ತೆರಿಗೆ ಕಟ್ಟದವರ ಆಸ್ತಿಗಳನ್ನು ಬಿಬಿಎಂಪಿ ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು, ವಿಜಯ್ ಮಲ್ಯ ಅವರ ಯುನೈಟೆಡ್ ಬ್ರಿವರೀಸ್ , ಎಂಬೆಸ್ಸಿ ಗ್ರೂಪ್ ಸೇರಿದಂತೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಕೋಟ್ಯಾಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿವೆ. ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್, ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರೇ ಈ ಬಗ್ಗೆ ಮೊದಲು ಗಮನ ಹರಿಸಿ, ಸರ್ಕಾರಕ್ಕೆ ಮೋಸ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದರು.
ಈ ಹಿಂದೆ ಬಿಬಿಎಂಪಿಯವರು ತೆರಿಗೆ ಕಟ್ಟದೇ ಇದ್ದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿತ್ತು. ಇದೀಗ ಕಾರ್ಪೊರೇಟರ್, ಶಾಸಕರು, ಅಧಿಕಾರಿಗಳು ಶಾಮೀಲಾಗಿದ್ದು ತೆರಿಗೆ ಕಟ್ಟದವರನ್ನು ರಕ್ಷಣೆ ಮಾಡಲಾಗುತ್ತಿದೆ. ಜನ ರೊಚ್ಚಿಗೇಳುವ ಮೊದಲು ಬಿಬಿಎಂಪಿ ಮತ್ತು ಸಚಿವ ಡಿಕೆ ಶಿವಕುಮಾರ್ ಎಚ್ಚೆತ್ತು, ತೆರಿಗೆ ಕಟ್ಟದ ಪ್ರಭಾವಿಗಳ ಮೇಲೆ ಕ್ರಮ ತೆಗೆದುಕೊಂಡು ಮಾದರಿಯಾಗಬೇಕು ಎಂದು ಹೇಳಿದರು.
ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್ ಮಾತನಾಡಿ, ಬಿಬಿಎಂಪಿ ಏನೋ ತೆರಿಗೆ ಬಾಕಿ ಇರುವವರ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಆದರೆ ಅವರಿಂದ ತೆರಿಗೆ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿದರೆ ರಾಜಕೀಯ ಬೆಂಬಲ ಇರುವವರು ಯಾವ ರೀತಿ ಲಾಭ ಪಡೆಯುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದ ಅವರು, ಬ್ರಾಂಡ್ ಬೆಂಗಳೂರು ಎಂದು ಡಿಕೆ ಶಿವಕುಮಾರ್ ದೊಡ್ಡದಾಗಿ ಹೇಳುತ್ತಿದ್ದಾರೆ. ಅವರ ಸ್ನೇಹಿತರು, ಪರಿಚಯದವರೇ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ದೂರಿದರು.
ಒಟಿಎಸ್ ಯೋಜನೆಯಲ್ಲಿ 3.95 ಲಕ್ಷ ಜನ ಬೆಂಗಳೂರಿನಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎಂದರೆ, ಯಾವ ರೀತಿಯ ಅಭಿವೃದ್ಧಿ ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು. ಒಟಿಎಸ್ ಯೋಜನೆಯಡಿ 1 ಲಕ್ಷ ಜನ 150 ಕೋಟಿ ರೂಪಾಯಿ ತೆರಿಗೆ ಕಟ್ಟಿದ್ದಾರೆ. ಇನ್ನೂ 600 ಕೋಟಿ ರೂಪಾಯಿ ತೆರಿಗೆ ಬಿಬಿಎಂಪಿಗೆ ಬರಬೇಕಾಗಿದೆ, ಇದರ ಜವಾಬ್ದಾರಿ ವಹಿಸಿಕೊಳ್ಳುವುದು ಯಾರು ಎಂದು ಪ್ರಶ್ನೆ ಮಾಡಿದರು.
ಬಿಎಂಟಿಸಿ, ಬಿಎಂಆರ್ ಸಿಎಲ್, ಸರ್ಕಾರಿ ಸಹಯೋಗದ ಕಂಪನಿ, ನಿಗಮಗಳು ತೆರಿಗೆಯನ್ನು ಕಟ್ಟಿಲ್ಲ. ಪ್ರತಿಷ್ಠಿತ ಕಾಂಟ್ರಾಕ್ಟರ್ಸ್‌ಗಳಾದ ಡಿಎಸ್ ಮ್ಯಾಕ್ಸ್, ಎಂಬೆಸ್ಸಿ ತೆರಿಗೆ ಕಟ್ಟಿಲ್ಲ, ಶಿಕ್ಷಣ ಸಂಸ್ಥೆಗಳಾದ ಕೆಪಿಜಿ, ಒಎಸ್‌ಯು ಕೂಡ ತೆರಿಗೆ ಕಟ್ಟಿಲ್ಲ. ವಿಧಾನಸಭಾ ಸದಸ್ಯರ ಕುಟುಂಬಸ್ಥರು ಕೂಡ ತೆರಿಗೆ ಕಟ್ಟಿಲ್ಲ. ಇಂತಹ ದೊಡ್ಡ ದೊಡ್ಡವರ ತೆರಿಗೆ ಉಳಿಸಲು ಸ್ಕೀಂ ತರಲು ಮುಂದಾಗಿದ್ದಾರೆ.
ಮೇವರಿಕ್ ಹೋಲ್ಡಿಂಗ್ಸ್ 60 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರು ಕೂಡ ಡಿಕೆ ಶಿವಕುಮಾರ್ ಅವರಿಗೆ ಬಿಡಿಎ ಕಾಂಪ್ಲೆಕ್ಸ್ ಅನ್ನು ಕಟ್ಟಲು ಅನುಮತಿ ಕೊಟ್ಟಿದ್ದಾರೆ. ನೀವೇನಾದರೂ ಬಾಕಿ ಇರುವ ತೆರಿಗೆ ವಸೂಲಿ ಮಾಡದೇ ಇದ್ದರೆ ಅಥವಾ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳದೆ ಇದ್ದರೆ, ಆಮ್ ಆದ್ಮಿ ಪಾರ್ಟಿ ವತಿಯಿಂದ ಕರ ನಿರಾಕರಣೆ ಚಳವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಜಗದೀಶ್ ಬಾಬು, ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಹಾಗೂ ಬೆಂಗಳೂರು ಮಹಿಳಾ ಘಟಕದ ಮುಖಂಡ ಅಂಜನಾ ಗೌಡ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 9 =
Remember me
