ನವದೆಹಲಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ, ಬಿಪಿಎಲ್​ ಕಾರ್ಡ್​ದಾರರು ಹಾಗೂ ಅಂತ್ಯೋದಯ ಫಲಾನುಭವಿಗಳಿಗೆ ಮಾಸಿಕ 10 ಕೆ.ಜಿ. ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಹೇಳಿದ ಸಮಯಕ್ಕೆ ಜಾರಿಯಾಗುವುದಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಷಯ ಬಹಿರಂಗಪಡಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಜುಲೈ 1ರಂದು ಅನ್ನಭಾಗ್ಯ ಯೋಜನೆ ಜಾರಿ ಅನುಮಾನ, ಸ್ವಲ್ಪ ವಿಳಂಬವಾಗಬಹುದು. ಕೇಂದ್ರದ ರಾಜಕೀಯದಿಂದಾಗಿ ಅಕ್ಕಿ ಹೊಂದಿಸಿಕೊಳ್ಳುವುದರಲ್ಲಿ ಸ್ವಲ್ಪ ತಡವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಪ್ಪು ಕಪ್ ಸೀಸನ್-2: ಸ್ಯಾಂಡಲ್​ವುಡ್​ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ
ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಕೇಳಿದ್ದೇವೆ, ಲಭ್ಯತೆ ನೋಡಿಕೊಂಡು ಜಾರಿ ಮಾಡಲಿದ್ದೇವೆ. ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರದ ಏಜೆನ್ಸಿಗಳ ಜತೆ ಚರ್ಚೆ ಜತೆಗೆ, ಕೇಂದ್ರೀಯ ಭಂಡಾರ, ನಫೆಡ್ ಸೇರಿ 3 ಸಂಸ್ಥೆಗಳ ಜತೆ ಕೊಟೇಷನ್ ಕೂಡ ಕೇಳಿದ್ದೇವೆ. ನಾಳೆ ಕೊಟೇಷನ್ ಸಿಗಲಿದೆ ಎಂದು ಯೋಜನೆ ಕುರಿತ ಅಡ್ಡಿಗಳ ಬಗ್ಗೆ ಸಿದ್ದರಾಮಯ್ಯ ವಿವರಿಸಿದರು.
ಇದನ್ನೂ ಓದಿ:ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ..: ನಟ ಜಗ್ಗೇಶ್​ಗೆ ‘ಮೇಷ್ಟ್ರ’ ಕನ್ನಡ ಪಾಠ!
ನಾವು ರಾಜ್ಯದ ಜನರಿಗೆ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ. ಅದಕ್ಕಾಗಿ ಅನೇಕ ರಾಜ್ಯಗಳಲ್ಲಿ ಮನವಿ ಮಾಡಿದ್ದೇವೆ. ತೆಲಂಗಾಣ ಗೋಧಿ ನೀಡುತ್ತಿದೆ, ಛತ್ತೀಸ್​ಗಢ 1 ಲಕ್ಷ ಮೆಟ್ರಿಕ್ ಟನ್ ನೀಡುತ್ತಿದೆ, ಅದೂ ಒಂದು ತಿಂಗಳು ಮಾತ್ರ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ವಿನಾಕಾರಣ ರಾಜಕಾರಣ ಮಾಡುತ್ತಿದೆ. ಅದಾಗ್ಯೂ ಜುಲೈ 1ರಂದೇ ಯೋಜನೆ ಜಾರಿ ಮಾಡಲು ಪ್ರಯತ್ನಿಸುತ್ತೇವೆ ಎಂಬುದಾಗಿಯೂ ಅವರು ತಿಳಿಸಿದರು. ಇನ್ನು ಈ ವಿಚಾರವಾಗಿ ಅಮಿತ್ ಷಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿಯೂ ಹೇಳಿದರು.
30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರೂ ಆದ್ರೆ ನೀವೇ ಜವಾಬ್ದಾರಿ: ಎಸ್​ಪಿಗೆ ಡಿವೈಎಸ್​ಪಿ ಪತ್ರ

ಮಹಿಳೆಯರಿಗೆ ಶಕ್ತಿ, ಮಕ್ಕಳಿಗೆ ನಿಶ್ಶಕ್ತಿ?: ವಾರಕ್ಕೆ 2 ದಿನ ನೀಡುತ್ತಿದ್ದ ಮೊಟ್ಟೆ-ಬಾಳೆಹಣ್ಣು ಇನ್ನು ಒಂದೇ ದಿನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − four =
Remember me
