ಪಂಕಜ ಕೆ.ಎಂ.ಬೆಂಗಳೂರು:ನೆಗಡಿ, ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಂದ ಹಿಡಿದು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಗಂಭೀರ ಕಾಯಿಲೆಗಳಿಗೂ ಇನ್ನು ಮುಂದೆ ಗ್ರಾಮೀಣ ಭಾಗದ ಜನರು ದೂರದ ಆಸ್ಪತ್ರೆಗಳನ್ನು ಅರಸಿ ಹೋಗಬೇಕಿಲ್ಲ. ಗ್ರಾಮೀಣರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮನೆ ಬಾಗಿಲಿಗೇ ವೈದ್ಯಕೀಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ. ಜನವರಿಯಿಂದಲೇ ವೈದ್ಯಕೀಯ ಸೇವೆ ನೀಡಲು ಸನ್ನದ್ಧವಾಗುತ್ತಿದೆ.
ರಾಜ್ಯದಲ್ಲಿ ಮೊದಲ ಹಂತವಾಗಿ ಬೀದರ್, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಯಾಗಲಿದೆ. ಸಾರ್ವಜನಿಕರ ಪ್ರತಿಕ್ರಿಯೆ ಹಾಗೂ ಯೋಜನೆಯ ಯಶಸ್ಸನ್ನು ಆಧರಿಸಿ ಹಂತ ಹಂತವಾಗಿ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಜಿಲ್ಲಾವಾರು ಇರುವಂತಹ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ತಿಂಗಳಿಗೊಮ್ಮೆ ಪ್ರತಿ ಗ್ರಾಮಕ್ಕೆ ತೆರಳಿ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗಾಗಿ ಬಜೆಟ್​ನಲ್ಲಿ 11 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಯೋಜನೆಯಡಿ ಅಗತ್ಯ ವೈದ್ಯಕೀಯ ಉಪಕರಣಗಳೊಂದಿಗೆ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಚಾರಿ ಕ್ಲಿನಿಕ್​ಗಳ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಪ್ರಾಥಮಿಕ ಚಿಕಿತ್ಸೆಯೊಂದಿಗೆ ಉಚಿತ ಔಷಧ ನೀಡಲಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರನ್ನು ಗುರುತಿಸಿ ನಿರ್ದಿಷ್ಟ ಆಸ್ಪತ್ರೆಗೆ ಶಿಫಾರಸು ಮಾಡಲಿದ್ದಾರೆ.
ಆರೋಗ್ಯ ವಾಹಿನಿ ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯೊಂದಿಗೆ ಆರೋಗ್ಯ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ಇದಕ್ಕಾಗಿ ಸಂಸ್ಥೆಯು ಇಲಾಖೆಗೆ ನಾಲ್ಕು ವಾಹನಗಳನ್ನು ನೀಡಿದೆ. ಇವುಗಳಿಗೆ ವೈದ್ಯಕೀಯ ಉಪಕರಣಗಳ ಅಳವಡಿಕೆಗಾಗಿ ಟೆಂಡರ್ ಆಹ್ವಾನಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ವಾಹನಗಳು ವೈದ್ಯಕೀಯ ಉಪಕರಣಗಳೊಂದಿಗೆ ಸಜ್ಜಾದ ಕೂಡಲೇ ಸಂಚಾರಿ ಕ್ಲಿನಿಕ್ ಸೇವೆ ಆರಂಭವಾಗಲಿದೆ. ಇದಕ್ಕಾಗಿ ಸರ್ಕಾರಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ವೈದ್ಯರು ಮತ್ತು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ.
ಹೇಗಿರಲಿದೆ ವೈದ್ಯಕೀಯ ಸೇವೆ?
ಏನೆಲ್ಲ ಉಪಯೋಗ?
ಆಯಾ ಕಾಯಿಲೆಗಳಿಗೆ ಸಂಬಂಧಿಸಿದ ನುರಿತ ವೈದ್ಯರಿಂದ ತಪಾಸಣೆ
ಗ್ರಾಮೀಣ ಪ್ರದೇಶದ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಿ, ಗಂಭೀರ ಹಂತದಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗುತ್ತಾರೆ. ಇದನ್ನು ತಪ್ಪಿಸಿ ಆರಂಭಿಕ ಹಂತದಲ್ಲೇ ಕಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಆರೋಗ್ಯಕರ ಸಮಾಜ ನಿರ್ವಣಕ್ಕಾಗಿ ಜನವರಿಗೆ ‘ಆರೋಗ್ಯ ವಾಹಿನಿ’ ಸೇವೆ ಆರಂಭಿಸಲಾಗುವುದು.
| ಡಿ. ರಂದೀಪ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ
ಆರೋಗ್ಯವಂತ ಸಮಾಜ ನಿರ್ವಣದ ಉದ್ದೇಶದೊಂದಿಗೆ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಬದಲಾದ ಜೀವನಶೈಲಿ ಹಾಗೂ ಆರೋಗ್ಯದ ಬಗೆಗಿನ ನಿರ್ಲಕ್ಷ್ಯದಿಂದಾಗಿ ಕಿರಿಯ ವಯಸ್ಸಿನಲ್ಲಿಯೇ ಅಸಾಂಕ್ರಾಮಿಕ ರೋಗಗಳು ಜನರನ್ನು ಕಾಡಲಾರಂಭಿಸಿದೆ. ಸಕಾಲದಲ್ಲಿ ಆರೋಗ್ಯ ತಪಾಸಣೆ ನಡೆಸಿ ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಜನರ ಆರೋಗ್ಯ ಕಾಪಾಡುವುದು ಯೋಜನೆಯ ಉದ್ದೇಶ.
ಡಾ. ಕೆ. ಸುಧಾಕರ್ ಆರೋಗ್ಯ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
