ಬೆಂಗಳೂರು:ಪಿಎಫ್ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳವರೆಗೆ ಯುಎಪಿಎ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿದ ಹಿನ್ನೆಲೆಯಲ್ಲಿ, ಗೃಹ ಸಚಿವ ಆರಗ ಜ್ಞಾನೇಂದ್ರ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ ನಡೆಸಿ, ನಿಷೇಧ ನಂತರದ ಪ್ರಕ್ರಿಯೆಗಳ ಅನುಷ್ಠಾನದ ಕುರಿತು ಚರ್ಚಿಸಿದರು.
ರಾಜ್ಯದ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಒಳಾಡಳಿತ ಇಲಾಖೆ) ರಜನೀಶ್ ಗೋಯಲ್ ಭಾಗವಹಿಸಿ ಸಚಿವರಿಗೆ ಮಾಹಿತಿ ನೀಡಿದರು.
ಕೇಂದ್ರ ಸರಕಾರ, ಪಿಎಫ್ಐ ಹಾಗೂ ಅದರ ಇತರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿ, ಅನುಷ್ಠಾನದ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡಿದೆ. ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಕಚೇರಿಗಳನ್ನು ಸೀಜ್ ಮಾಡುವುದು ಮತ್ತು ಕಾನೂನು ಕ್ರಮ ಕೈಗೊಂಡಿರುವ ಕುರಿತು ಸಚಿವರು ಮಾಹಿತಿ ಪಡೆದುಕೊಂಡರು.
ಕೇಂದ್ರದ ನಿರ್ದೇಶನದಂತೆ, ನಿಷೇಧ ನಂತರದ ಪ್ರಕ್ರಿಯೆಗಳ ಸಮರ್ಪಕವಾದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿ, ಸರ್ಕಾರ ಸುತ್ತೋಲೆ ಹೊರಡಿಸಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten + 3 =
Remember me
