ಬೆಂಗಳೂರು: ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಈ ಯೋಜನೆಯಡಿ ಸ್ವ-ಸಹಾಯ ಗುಂಪುಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ತರಬೇತಿ ನೀಡಲಾಗುತ್ತಿದ್ದು, ಪ್ರತಿ ಜಿಲ್ಲೆಯಿಂದ 3 ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಾಗುತ್ತದೆ.
2024-25 ನೇ ಸಾಲಿನ ಆಯವ್ಯಯದಲ್ಲಿ ೋಷಿಸಿದಂತೆ ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ರೂಪಿಸಲಾಗಿದೆ.ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯಿತಿಗಳಂತೆ ಒಟ್ಟು 29 ಜಿಲ್ಲೆಗಳಿಗೆ 87 ಕೇಂದ್ರಗಳನ್ನು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆ 6 ಕೇಂದ್ರಗಳನ್ನು ಸೇರಿ ಒಟ್ಟಾರೆ 100 ಕೇಂದ್ರಗಳನ್ನು ನರೇಗಾ ಯೋಜನೆ ಅಡಿಯಲ್ಲಿ ಅಂದಾಜು 17.50 ಲಕ್ಷ ರೂ.ಗಳಲ್ಲಿ ಕಾರ್ಯಾಗಾರ ನಡೆಸಲು ಪಂಚಾಯತ್ ರಾಜ್ ಆಯುಕ್ತಾಲಯ ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 6 =
Remember me
