ಬೆಂಗಳೂರು:ರಾಜ್ಯ ಬಜೆಟ್​ನಲ್ಲಿ ಘೊಷಿಸಿರುವಂತೆ ಮೋಟಾರು ವಾಹನಗಳ ತೆರಿಗೆ ಪರಿಷ್ಕರಣೆ ಸೋಮವಾರದಿಂದಲೇ ಜಾರಿಯಾಗಿದೆ. ಮೋಟಾರು ವಾಹನಗಳ ತೆರಿಗೆ ಪರಿಷ್ಕರಣೆಯಿಂದ ಪ್ರಸಕ್ತ ಆರ್ಥಿಕ ವರ್ಷದಲ್ಲಿ 472 ಕೋಟಿ ರೂ. ಹೆಚ್ಚುವರಿ ವರಮಾನ ಸಂಗ್ರಹಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ.
ಆಯ್ದ ವಾಹನಗಳ ತೆರಿಗೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಜು.7ರಂದು ಮಂಡಿಸಿದ್ದ ಬಜೆಟ್​ನಲ್ಲಿ ಪ್ರಕಟಿಸಿದ್ದರು. ಅದಕ್ಕೆ ಪೂರಕವಾಗಿ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆ 2023ಕ್ಕೆ ವಿಧಾನಮಂಡಲದ ಒಪ್ಪಿಗೆ ಪಡೆಯಲಾಗಿತ್ತು.
ಶಾಲೆ, ಕಾಲೇಜುಗಳ ವಾಹನಗಳು, ಅತಿ ಭಾರದ ಸರಕು ಸಾಗಣೆ ವಾಹನಗಳು, ಮೋಟಾರು ಕ್ಯಾಬ್​ಗಳ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಶಾಲೆಗಳ ಒಡೆತನದಲ್ಲಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸಂಚಾರಕ್ಕೆ ಬಳಸುವ ವಾಹನಗಳ ಪ್ರತಿ ಚದರ ಮೀಟರ್​ಗೆ ತೆರಿಗೆಯನ್ನು 20 ರೂ. ನಿಂದ 100 ರೂ.ಗೆ ಏರಿಕೆ ಮಾಡಲಾಗಿದೆ. ಇತರ ಶಿಕ್ಷಣ ಸಂಸ್ಥೆಗಳ ಒಡೆತನದಲ್ಲಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸಂಚಾರಕ್ಕೆ ಬಳಸುವ ವಾಹನಗಳ ಪ್ರತಿ ಚದರ ಮೀಟರ್ ವಿಸ್ತೀರ್ಣದ ತೆರಿಗೆಯನ್ನು 80ರಿಂದ 200 ರೂ. ಹೆಚ್ಚಿಸಲಾಗಿದೆ.

ಹೊರುವ ಭಾರವೂ ಸೇರಿ ಒಟ್ಟು ತೂಕ 1.5 ಟನ್​ನಿಂದ 5.5 ಟನ್​ಗಳವರೆಗೆ ಮಾತ್ರ ಇರುವ ವಾಹನಗಳಿಗೆ ಪೂರ್ಣಾವಧಿ ತೆರಿಗೆ ಪಡೆಯಲಾಗುತ್ತಿತ್ತು. ಅದಕ್ಕಿಂತ ಹೆಚ್ಚಿನ ಭಾರದ ವಾಹನಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ತೆರಿಗೆ ಪಾವತಿಸಬೇಕಿತ್ತು. ಈಗ 1.5 ಟನ್​ನಿಂದ 12 ಟನ್​ಗಳವರೆಗಿನ ತೂಕದ ವಾಹನಗಳಿಗೂ ಪೂರ್ಣಾವಧಿ ತೆರಿಗೆ ಸಂಗ್ರಹಿಸಲಾಗುತ್ತದೆ.
15 ಲಕ್ಷಕ್ಕಿಂತ ಹೆಚ್ಚಿನ ಬೆಲೆಯ ಕ್ಯಾಬ್​ಗಳಿಗೆ ಮಾತ್ರ ಆ ವಾಹನದ ಮೌಲ್ಯದ ಶೇ.15 ತೆರಿಗೆ ವಿಧಿಸಲಾಗುತ್ತಿತ್ತು. ಇನ್ನು ಮುಂದೆ 10 ಲಕ್ಷದಿಂದ 15 ಲಕ್ಷದವರೆಗಿನ ಬೆಲೆಯ ಕ್ಯಾಬ್​ಗಳಿಗೆ ಅವುಗಳ ಮೌಲ್ಯದ ಶೇ.9 ತೆರಿಗೆ ವಿಧಿಸಲಾಗುತ್ತದೆ. 15 ಲಕ್ಷಕ್ಕಿಂತ ಹೆಚ್ಚಿನ ಬೆಲೆಯ ಕ್ಯಾಬ್​ಗಳಿಗೆ ಈ ಹಿಂದಿನಂತೆಯೇ ಅವುಗಳ ಮೌಲ್ಯದ ಶೇ.15 ವಿಧಿಸಲಾಗುತ್ತದೆ.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 20 =
Remember me
