ಬೆಂಗಳೂರು:ಶಾಸನ ಸಭೆ ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ಅವಶ್ಯ ಎಂದು ಪ್ರತಿಪಾದಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಾವು ಪ್ರಧಾನಿಯಾಗಿದ್ದ ವೇಳೆ ರಾಜ್ಯಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಮಂಡನೆಯಾಗಿದ್ದನ್ನು ಹಾಗೂ ಪ್ರಧಾನಿ ಮೋದಿಗೆ ಬರೆದಿರುವ ಪತ್ರವನ್ನು ನೆನಪಿಸಿದ್ದಾರೆ.ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆಯಾಗುವುದು ಮೊದಲ ಉತ್ತಮ ಕಾರ್ಯವಾಗಿದೆ. ಒಟ್ಟು ಮತದಾರರಲ್ಲಿ ಸುಮಾರು ಶೇ.50 ರಷ್ಟು ಮಹಿಳೆಯರು ಇರುವುದು ಶಾಸಕಾಂಗ ಸಭೆಗಳು ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿಯ ಕಲ್ಪನೆಯನ್ನು ಮರುಪರಿಶೀಲಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.1996ರಲ್ಲಿ ತಾವು ಪ್ರಧಾನ ಮಂತ್ರಿಯಾಗಿ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿಗೆ ತಂದಿದ್ದರೂ ವಿಧೇಯಕ ಅಂಗೀಕಾರ ಪಡೆಯಲು ಯಶಸ್ವಿಯಾಗಲಿಲ್ಲ. ನಾನು 1995ರಲ್ಲಿ ಪ್ರಧಾನ ಮಂತ್ರಿ ಪಿ.ವಿ. ನರಸಿಂಹರಾವ್ ಅವರೊಂದಿಗೆ ಮುಖ್ಯಮಂತ್ರಿಯಾಗಿಯೂ ಮಹಿಳಾ ಮೀಸಲಾತಿಗೆ ಒತ್ತಾಯಿಸಿದ್ದೆ. ನಂತರ 2008ರಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಾಡಿದ ಪ್ರಯತ್ನಗಳು ತಾರ್ಕಿಕ ಅಂತ್ಯವನ್ನು ತಲುಪಲಿಲ್ಲ.ಎರಡೂ ಬಾರಿ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದಾಗ ಸರ್ಕಾರಗಳು ಬಹುಮತವನ್ನು ಹೊಂದಿರಲಿಲ್ಲ. ಅಲ್ಲದೆ, ತಮ್ಮ ಸಮ್ಮಿಶ್ರ ಪಾಲುದಾರರ ಮೇಲೆ ಅವಲಂಬಿತವಾಗಿದ್ದವು. ನೀವು ಸಂಸತ್ತಿನಲ್ಲಿ ಬಹುಮತವನ್ನು ಹೊಂದಲು ಅದೃಷ್ಟವಂತರು ಮತ್ತು ಅದನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಗಬಹುದು ಎಂದು ದೇವೇಗೌಡರು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದನ್ನು ಪ್ರಸ್ತಾಪಿಸಿದ್ದಾರೆ.2024ರಲ್ಲಿ ಲೋಕಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಒತ್ತಾಯಿಸಿದ್ದೆ ಎಂದು ದೇವೇಗೌಡರು ನೆನಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
