ಬೆಂಗಳೂರು:ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸ್ಪಷ್ಟ ಬಹುಮತ ಇದೆಯೆಂದು ಹಿಂದಿ ಹೇರಿಕೆ ರಾಜಕೀಯ ಮಾಡಿದರೆ ಭಾಷಾ ದಳ್ಳುರಿಯಲ್ಲಿ ಬೇಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಭಾರತ ಎಂದರೆ ಹಿಂದು, ಹಿಂದಿ ಅಷ್ಟೇ ಅಲ್ಲ. ಭಾರತ ನಮ್ಮೆಲ್ಲರದ್ದು. ಸ್ಥಳೀಯ ಬಾಷೆಗಳ ಉದ್ಧಾರ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಬರುತ್ತಿದೆ. ಆದರೆ ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ ಮಾಡುವುದು ಕೇಂದ್ರ ಸರ್ಕಾರದ ದುರುದ್ಧೇಶ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದ ಸಮಿತಿ ಹಿಂದಿ ಹೇರಿಗೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ. ಇದು ಇಡೀ ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿಯಾಗಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎನ್ನುವುದರ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕನ್ನಡದ ಮೇಲೆ ಕೇಂದ್ರ ಸರ್ಕಾರ ಈವರೆಗೆ ನಡೆಸಿದ ದಬ್ಬಾಳಿಕೆಯೇ ಹಿಂದಿ ಹೇರಿಕೆಗೆ ಸಾಕ್ಷಿ ಎಂದಿದ್ದಾರೆ. ಸರ್ಕಾರ ತನ್ನ ಹಳೆಯ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ತನ್ನ ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ@BJP4Indiaಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ.@AmitShahನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ.1/11#ಹಿಂದಿ_ಹೇರಿಕೆ_ನಿಲ್ಲಲಿpic.twitter.com/qoqIstIb74— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)October 10, 2022
ಕೇಂದ್ರ@BJP4Indiaಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ.@AmitShahನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ.1/11#ಹಿಂದಿ_ಹೇರಿಕೆ_ನಿಲ್ಲಲಿpic.twitter.com/qoqIstIb74
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − four =
Remember me
