ಚಿಕ್ಕಮಗಳೂರು:ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ:ನಾನು ಪ್ರಾಣ ಕಳೆದುಕೊಳ್ಳಲು ಬಯಸಿದ್ದೆ..ಅದಕ್ಕೇ ಗಾಂಜಾ ತಿಂದೆ ಎಂದ ಖ್ಯಾತ ನಟ
ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೊಂದಲವಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್​ವೈ, ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ. ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಮೂಲಕ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ ಎಂದರು.
ಹೀಗಾಗಿ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಪ್ರಯತ್ನ ಮಾಡುತ್ತಿದೆ ಜತೆಗೆ ಇದಕ್ಕೆ ಪೂರಕ ವಾತಾವರಣವೂ ಇದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಾಗೂ ಪಿತೂರಿ ನಡೆಯುತ್ತಿದೆ. ಇದನ್ನು ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಷಡ್ಯಂತ್ರಗಳಿಂದ ಶೋಭಾ ಕರಂದ್ಲಾಜೆ ದೃತಿಗೆಡುವುದಿಲ್ಲ ಎಂದರು.
ಇದನ್ನೂ ಓದಿ:ರಾಕುಲ್ ಪ್ರೀತ್ ಸಿಂಗ್ ಜೊತೆ ಹನಿಮೂನ್ ಪ್ಲಾನ್: ರಣಬೀರ್​ನನ್ನು ಫಾಲೋ ಮಾಡುತ್ತಿರುವ ಜಾಕಿ..!
ಕಳೆದ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 3.50 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಚುನಾವಣೆಯಲ್ಲಿ ಇದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದರು. ಹೀಗೆಂದು ಹೇಳುವ ಮೂಲಕ ಶೋಭಾ ಕರಂದ್ಲಾಜೆ ಅವರೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಎನ್ನುವುದನ್ನು ಪರೋಕ್ಷವಾಗಿ ಘೋಷಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
