ಬೆಂಗಳೂರು:ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎನ್​. ಮಂಜುನಾಥ್​ ಅವರು ಹಾಲಿ ಸಂಸದ ಹಾಗೂ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ. ಸುರೇಶ್​ ವಿರುದ್ಧ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬೆಳಗ್ಗೆ 10.28ರ ಹೊತ್ತಿಗೆ ಕಾಂಗ್ರೆಸ್‌ನ ಡಿ.ಕೆ ಸುರೇಶ್‌ ಅವರಿಗಿಂತ ಮಂಜುನಾಥ್​ ಅವರು 73,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೇ ಟ್ರೆಂಡ್​ ಮುಂದುವರಿದರೆ ಮಂಜುನಾಥ್​ ಅವರಿಗೆ ಸುಲಭ ಗೆಲುವು ಲಭಿಸಲಿದೆ. ಮಂಜುನಾಥ್​ ಅವರ ಮುನ್ನಡೆ ಅಂತರ ನಿರಂತರವಾಗಿ ಏರುತ್ತಲೇ ಇದೆ. ಬಹುತೇಕ ಮಂಜುನಾಥ್​ ಅವರಿಗೆ ಗೆಲುವು ಸುಲಭವಾಗಲಿದೆ ಎಂದು ಹೇಳಲಾಗುತ್ತಿದೆ.
ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರ ಅಳಿಯರಾಗಿರುವ ಮಂಜುನಾಥ್ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಿದ್ದಾರೆ. ಜೆಡಿಎಸ್​ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಂಜುನಾಥ್​ ಹಾಲಿ ಸಂಸದ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಸಹೋದರ ಡಿ.ಕೆ. ಸುರೇಶ್​ ವಿರುದ್ಧ ಪ್ರಚಂಡ ಮುನ್ನಡೆ ಸಾಧಿಸಿ, ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ.
ಬೆಳಗ್ಗೆ 10.13ರ ಟ್ರೆಂಡ್​ ಪ್ರಕಾರ ಒಟ್ಟು 545 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 295ರಲ್ಲಿ ಮತ್ತು ಕಾಂಗ್ರೆಸ್​ 208ರಲ್ಲಿ ಹಾಗೂ ಇತರೆ 40 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್​ 9 ಮತ್ತು ಜೆಡಿಎಸ್​ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಚಾಮರಾಜನಗರ ಮತ ಎಣಿಕೆ ಕೇಂದ್ರದ ಸುತ್ತಮುತ್ತ ಹಾಸನ ಕ್ಷೇತ್ರದ್ದೇ ಚರ್ಚೆ: ಪ್ರಜ್ವಲ್​ ಫಲಿತಾಂಶದ ಮೇಲೆ ಕುತೂಹಲ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 − two =
Remember me
