ಬೆಳಗಾವಿ:ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತವಾಗಿರುವ ಘಟನೆ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ. ಈ ವೇಳೆ ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೂ ಮೇಲೆ ಹಲ್ಲೆ ನಡೆದಿದೆ.
ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಯುವಕರ ನಡುವೆ ಗಲಾಟೆ ಆರಂಭವಾಗಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರಿಂದ ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ.
ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್‌ ಎಂಬುವರ ಮೇಲೆ ಚಾಕು ಇರಿತವಾಗಿದೆ. ಮತ್ತೋರ್ವ ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ್ ಮೇಲೆಯೂ ಹಲ್ಲೆ ನಡೆದಿದೆ.
ಗಾಯಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಮೀನ್ ಜಂಗಲಶೇಖ್ ಮತ್ತು ಸಹಚರರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದ್ದು, ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 4 =
Remember me
